ಮಹಾರಾಷ್ಟ್ರದಲ್ಲಿ ಭಾರಿ ಮಳೆ... ಯಾದಗಿರಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ! - ಯಾದಗಿರಿ ಸುದ್ದಿ
ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಕೃಷ್ಣ ಹಾಗೂ ಭೀಮಾ ನದಿ ಪಾತ್ರದ ಜನರು ನದಿ ತೀರದ ಪ್ರದೇಶಗಳಿಗೆ ಹೋಗದಂತೆ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆ;ಜಿಲ್ಲಾಡಳಿತದಿಂದ ಹೈ ಅಲರ್ಟ್
ಯಾದಗಿರಿ: ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಕೃಷ್ಣ ಹಾಗೂ ಭೀಮಾ ನದಿ ಪಾತ್ರದ ಜನರು ನದಿ ತೀರದ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿದೆ.
ಕಳೆದ ಕೆಲ ದಿನಗಳ ಹಿಂದೆ ಕೃಷ್ಣಾ ನದಿ ಪ್ರವಾಹದಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವುಂಟಾಗಿತ್ತು. ಆ ಪ್ರವಾಹದಿಂದ ಹೊರಬರುವ ಮುನ್ನವೇ ಮತ್ತೊಂದು ಪ್ರವಾಹದ ಭೀತಿ ಎದುರಾಗಿರುವುದಕ್ಕೆ ಜಿಲ್ಲೆಯ ಜನರು ಚಿಂತಾಕ್ರಾಂತರಾಗಿದ್ದಾರೆ.