ಸುರಪುರ: ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮಕ್ಕೆ ಹಳ್ಳದ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಇಷ್ಟೆಲ್ಲಾ ಅನಾಹುತಗಳು ಸಂಭವಿಸಿದರೂ ಸ್ಥಳೀಯ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಹಳ್ಳದ ನೀರು ನುಗ್ಗಿ ದ್ವೀಪದಂತಾದ ಗ್ರಾಮ: ಸ್ಥಳಕ್ಕೆ ಬರದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ
ಹುಣಸಿ ತಾಲೂಕಿನ ಮದಲಿಮಗನಾಳ ಗ್ರಾಮ ಜಲ ದಿಗ್ಬಂಧನಕ್ಕೆ ಒಳಗಾದರೂ ಗ್ರಾಮಕ್ಕೆ ಯಾವುದೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಭೇಟಿ ನೀಡದೆ ಬೇಜವಾಬ್ದಾರಿ ತೋರಿದ್ದಾರೆ. ಇದರಿಂದ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ಹತ್ತಕ್ಕೂ ಹೆಚ್ಚು ಮನೆಗಳಿಗೆ ರಭಸವಾಗಿ ನುಗ್ಗಿದ ನೀರಿನಿಂದ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ನೀರುಪಾಲಾಗಿವೆ. ಅನೇಕ ಕುರಿ ಮರಿಗಳು ನೀರಲ್ಲಿ ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತಿದ್ದ ಬೀಜ ಮತ್ತು ಬೆಳೆ ನಾಶವಾಗಿದೆ. 70ಕ್ಕೂ ಹೆಚ್ಚು ಪಂಪ್ಸೆಟ್ ಮೋಟರ್‌ಗಳು ನೀರಲ್ಲಿ ಕೊಚ್ಚಿ ಹೋಗಿವೆ.
ನಿರ್ಮಾಣ ಹಂತದ ಸೇತುವೆ ಸಹ ಸಂಪೂರ್ಣ ಕೊಚ್ಚಿಕೊಂಡು ಹೋಗಿದೆ. ಗ್ರಾಮ ಒಂದು ರೀತಿಯ ಜಲ ದಿಗ್ಬಂಧನಕ್ಕೆ ಒಳಗಾದರೂ ಗ್ರಾಮಕ್ಕೆ ಯಾವುದೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡದೆ ಬೇಜವಾಬ್ದಾರಿ ತೋರಿದ್ದಾರೆ. ಇದರಿಂದ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.