ಯಾದಗಿರಿ:ವರುಣನ ಅಬ್ಬರಕ್ಕೆ ಜಿಲ್ಲೆಯ ಅನ್ನದಾತರು ಈಗ ಕಣ್ಣೀರು ಹಾಕುವಂತಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಮೀನಿಗೆ ನೀರು ನುಗ್ಗಿದ ಪರಿಣಾಮ, ಹತ್ತಿ ಬೆಳೆ ಜಲಾವೃತವಾಗಿ ಬೆಳೆಗೆ ಹಾನಿಯಾಗಿದೆ.
ವರುಣನ ಆರ್ಭಟ: ಕಣ್ಣೀರಿನಲ್ಲಿ ಯಾದಗಿರಿಯ ಅನ್ನದಾತ
ಯಾದಗಿರಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಮೀನುಗಳಿಗೆ ನೀರು ನುಗ್ಗಿದೆ. ಪರಿಣಾಮ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಿಲ್ಲೆಯ ಶಹಾಪುರ ತಾಲೂಕಿನ ಸಗರ, ರಸ್ತಾಪುರ, ಗೋಗಿ, ದೋರನಹಳ್ಳಿ ಮೊದಲಾದ ಕಡೆ ಮಳೆ ನೀರು ಜಮೀನಿಗೆ ನುಗ್ಗಿದ ಪರಿಣಾಮ ಬೆಳೆ ನೀರು ಪಾಲಾಗಿದೆ. ಒಂದು ಕಡೆ ರೈತರು ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಇದೀಗ ಮಳೆಯಿಂದ ಬೆಳೆ ಹಾನಿಯಾಗಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಸಾಲ ಮಾಡಿ ಬೆಳೆದ ಸಾವಿರಾರು ಎಕರೆ ಪ್ರದೇಶದ ಬೆಳೆಗೆ ಹಾನಿಯಾಗಿದೆ. ಬೆಳೆ ನಷ್ಟದಿಂದ ಜಿಲ್ಲೆಯ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಬೆಳೆ ಪರಿಹಾರ ಧನ ನೀಡುವ ಮೂಲಕ ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ಬರಬೇಕು ಎಂತ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.