ಯಾದಗಿರಿ:ಜಿಲ್ಲೆಯಾದ್ಯಂತ ಕಳೆದ ರಾತ್ರಿ ಮಳೆಯ ರೌದ್ರನರ್ತನಕ್ಕೆ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.
ಯಾದಗಿರಿ ಜಿಲ್ಲೆಯಾದ್ಯಂತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಭಾರೀ ಮಳೆ ಸುರಿದಿದೆ. ವರುಣನ ರೌದ್ರನರ್ತನಕ್ಕೆ ಯಾದಗಿರಿ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ.
ರಾತ್ರಿಯಿಡೀ ಸುರಿದ ಮಳೆಯ ಅರ್ಭಟಕ್ಕೆ ಜಿಲ್ಲೆಯ ಅನೇಕ ಗ್ರಾಮೀಣ ಭಾಗದ ರಸ್ತೆಗಳು ಕೊಚ್ಚಿಹೋಗಿದ್ದು, ಪ್ರಮುಖ ರಸ್ತೆಗಳ ಮೇಲೆ ಹರಿಯುತ್ತಿರುವ ನೀರಿನಿಂದ ವಾಹನಗಳು ಸೇರಿದಂತೆ ಜನ ಸಂಚಾರಕ್ಕೆ ತೊಂದರೆಯಾಗಿದೆ. ಇತ್ತೀಚಿಗಷ್ಟೇ ರೈತರು ಬಿತ್ತನೆ ಮಾಡಿದ ಅಪಾರ ಪ್ರಮಾಣದ ಹೆಸರು ಬೆಳೆ ಮಳೆಯಿಂದ ಹಾನಿಗೀಡಾಗಿದ್ದು, ರೈತಾಪಿ ವರ್ಗ ಸಂಕಷ್ಟಕ್ಕೀಡಾಗುವಂತೆ ಮಾಡಿದೆ.
ಜಿಲ್ಲೆಯ ಶಹಪುರ ಪಟ್ಟಣದಲ್ಲಿ ನಿಂತಿರುವ ಮಳೆ ನೀರಿನಲ್ಲಿ ಕಾರುಗಳು ನೀರಿನಲ್ಲಿ ಮುಳುಗಿವೆ. ಜೊತೆಗೆ ಸಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀರು ನುಗ್ಗಿದ್ದು ರೋಗಿಗಳು ಪರದಾಡುವಂತಾಗಿದೆ. ಬಿಸಿಲಿನಿಂದ ಅದೆಷ್ಟೋ ಸಮಯದಿಂದ ಬರಡಾಗಿದ್ದ ಹಳ್ಳಕೊಳ್ಳಗಳು ಕೃಪೆಯಿಂದ ತುಂಬಿ ಹರಿಯುತ್ತಿವೆ.