ಯಾದಗಿರಿ: ಜಿಲ್ಲೆಯ ಜನರನ್ನು ವರುಣದೇವ ಹೈರಾಣಾಗಿಸಿದ್ದು, ಐದು ಗಂಟೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಯಾದಗಿರಿ ಜಿಲ್ಲೆಯ ರೈತರಿಗೆ ಖುಷಿ ತಂದ ಭಾರಿ ಮಳೆ! - ಯಾದಗಿರಿ ಜಿಲ್ಲೆ
ಯಾದಗಿರಿ ಸೇರಿದಂತೆ ಜಿಲ್ಲೆಯ ಶಹಪುರ, ಸುರಪುರ, ಗುರಮಿಠಕಲ್ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ
ಭಾರಿ ಮಳೆಗೆ ನಗರದ ಬಹುತೇಕ ರಸ್ತೆಗಳ ಮೇಲೆ ಅರ್ಧ ಅಡಿಯಷ್ಟು ನೀರು ಹರಿಯುತ್ತಿದ್ದು, ಪಾದಚಾರಿಗಳು, ವಾಹನ ಸವಾರರು ಪರದಾಡುವಂತಾಗಿದೆ. ತಗ್ಗು ಪ್ರದೇಶದ ಬಡಾವಣೆಗಳ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಮಳೆ ನೀರು ಹೊರಹಾಕಲು ನಿವಾಸಿಗಳು ಪರದಾಡುತ್ತಿದ್ದಾರೆ.
ಇನ್ನು ಅಬ್ಬರದ ಮಳೆಗೆ ಜಿಲ್ಲೆಯಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕೆಲ ತಗ್ಗು ಪ್ರದೇಶದ ರೈತರ ಜಮೀನುಗಳಲ್ಲಿ ನೀರು ತುಂಬಿಕೊಂಡಿದೆ.