ಯಾದಗಿರಿ:ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತಾಲೂಕಿನ ಚಾಮನಹಳ್ಳಿಯಿಂದ ಜಿಲ್ಲಾ ಕೇಂದ್ರ ಯಾದಗಿರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತಗೊಂಡ ಹಿನ್ನೆಲೆ ಸಂಚಾರ ದುಸ್ತರವಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಚಿತ್ತಾ ಮಳೆ ರಗಳೆ; ಜಲಾವೃತಗೊಂಡ ಸೇತುವೆಗಳು
ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಅರ್ಭಟಕ್ಕೆ ಹತ್ತಿಕುಣಿ ಜಲಾಶಯ ಮತ್ತೆ ಭರ್ತಿಯಾಗಿದ್ದು, ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ.
ಜಲಾವೃತಗೊಂಡ ಸೇತುವೆ
ಮಳೆಯ ಅರ್ಭಟಕ್ಕೆ ಹತ್ತಿಕುಣಿ ಜಲಾಶಯ ಮತ್ತೆ ಭರ್ತಿಯಾಗಿದ್ದು, ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ. ಪರಿಣಾಮ ಹಳ್ಳ ಉಕ್ಕಿ ಹರಿಯುತ್ತಿದ್ದು ಚಾಮನಹಳ್ಳಿ-ಯಾದಗಿರಿ ಸಂಪರ್ಕ ಕಡಿತಗೊಂಡಿದೆ. ಮತ್ತೊಂದೆಡೆ ಹಳ್ಳದ ನೀರು ಪಕ್ಕದ ಜಮೀನುಗಳಿಗೆ ನುಗ್ಗಿದ್ದು ಹತ್ತಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ನೀರುಪಾಲಾಗಿವೆ. ಪರಿಣಾಮ ಭಾರಿ ಹಾನಿ ಉಂಟಾಗಿದೆ. ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.