ಗುರುಮಠಕಲ್ (ಯಾದಗಿರಿ): ತಾಲೂಕಿನಾದ್ಯಂತ ಕಳೆದ ಮೂರು ದಿನದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಅವಾಂತರ ಸೃಷ್ಟಿಸಿದೆ. ಎಮ್.ಟಿ. ಪಲ್ಲಿ ಗ್ರಾಮದ ಕೃಷ್ಣಪ್ಪ ಅವರ ಜಮೀನಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.
ಗುರುಮಠಕಲ್ನಲ್ಲಿ ಭಾರೀ ಮಳೆ: ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಾಶ - crop destruction
ಗುರುಮಠಕಲ್ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು, ಎಮ್.ಟಿ. ಪಲ್ಲಿ ಗ್ರಾಮದ ಕೃಷ್ಣಪ್ಪ ಅವರ ಜಮೀನಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.
ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಾಶ
ತಾಲೂಕಿನ ಎಮ್.ಟಿ. ಪಲ್ಲಿ ಗ್ರಾಮದ ಕೃಷ್ಣಪ್ಪ ಅವರ ಮೂರು ಎಕರೆ ಜಮೀನಿಗೆ ನೀರು ನುಗ್ಗಿದ್ದು, ಜಮೀನಿನಲ್ಲಿದ್ದ ಹೆಸರು ಸಂಪೂರ್ಣ ನಾಶವಾಗಿದೆ. ಅಲ್ಲದೇ ಜಮೀನು ಕೆರೆಯಂತಾಗಿದೆ. ಈ ಜಮೀನು ನಂಬಿಕೊಂಡು ಕೃಷ್ಣಪ್ಪ ಕುಟುಂಬದ ಹತ್ತು ಜನ ಜೀವನ ಸಾಗಿಸುತ್ತಿದ್ದರು.
ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕ ಆಗ್ರಹಿಸಿದೆ.