ಯಾದಗಿರಿ :ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಭತ್ತದ ಬೆಳೆ ನೆಲಕ್ಕುರುಳಿದೆ.
ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಎಕರೆ ಭತ್ತದ ಬೆಳೆ.. - ಯಾದಗಿರಿ ಸುದ್ದಿ
ವಡಗೇರಾ ತಾಲೂಕಿನ ಗೊಂದಡಗಿ, ಬೆಂಡೆಬೆಂಬಳಿ, ಶಿವನೂರು ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಭತ್ತದ ಬೆಳೆ ಹಾನಿ.
ಬಿರುಗಾಳಿ-ಮಳೆಗೆ ನೆಲಕಚ್ಚಿದ ನೂರಾರು ಎಕರೆ ಭತ್ತದ ಬೆಳೆ
ಜಿಲ್ಲೆಯ ವಡಗೇರಾ ತಾಲೂಕಿನ ಗೊಂದಡಗಿ, ಬೆಂಡೆಬೆಂಬಳಿ, ಶಿವನೂರು ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಸರ್ಕಾರ ಬೆಳೆಹಾನಿಗೆ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.