ಸುರಪುರ:ನಾನು ಸಿದ್ದರಾಮಯ್ಯನವರ ಅಭಿಮಾನಿಯಾಗಿದ್ದೇನೆ ಎಂದು ಸುರಪುರ ಬಿಜೆಪಿ ಶಾಸಕ ನರಸಿಂಹನಾಯಕ (ರಾಜುಗೌಡ) ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದರು.
ಸುರಪುರ ತಾಲೂಕಿನ ಖಾನಾಪುರ ಎಸ್.ಹೆಚ್ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯನವರು ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎನ್ನುವ ವರದಿಗಾರರ ಪ್ರಶ್ನೆಗೆ ಉತ್ತರಿಸಿ, ಸಿದ್ದರಾಮಯ್ಯನವರ ಹೆಸರಲ್ಲೇ ರಾಮ ಇದ್ದಾನೆ.
ಹಾಗಾಗಿ, ನಾನು ಒಬ್ಬ ಸಿದ್ದರಾಮಯ್ಯನವರ ಅಭಿಮಾನಿಯಾಗಿ ಅವರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಾರೆ ಎಂದು ಭರವಸೆ ವ್ಯಕ್ತಪಡಿಸುವುದಾಗಿ ತಿಳಿಸಿದರು.