ಸುರಪುರ: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ರಚನೆಗೆ ಕನ್ನಡಪರ ಸಂಘಟನೆಗಳು ವಿರೋಧಿಸುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ರಾಜ್ಯ ಸಂಚಾಲಕ ಬಸವರಾಜ ಪಡಕೋಟೆ, ಪ್ರಾಧಿಕಾರ ರಚನೆಗೆ ತಮ್ಮ ವಿರೋಧವಿಲ್ಲ ಎಂದಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನನ್ನ ವಿರೋಧವಿಲ್ಲ: ಬಸವರಾಜ ಪಡಕೋಟೆ - surapura yadgiri latest news
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಆದ್ರೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ರಾಜ್ಯ ಸಂಚಾಲಕ ಬಸವರಾಜ ಪಡಕೋಟೆ, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಾನು ವಿರೋಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿರುವ ಬಸವರಾಜ ಪಡಕೋಟೆ, ರಾಜ್ಯದಲ್ಲಿರುವ ಎಲ್ಲಾ ಮರಾಠರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದವರು. ಅವರ್ಯಾರೂ ಕೂಡ ಕನ್ನಡ ವಿರೋಧಿತನವನ್ನು ಪ್ರದರ್ಶಿಸಿಲ್ಲ. ಆದರೆ ಬೆಳಗಾವಿ ಭಾಗದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಿಡಿಗೇಡಿಗಳು ನಾಡದ್ರೋಹದ ಕೆಲಸ ಮಾಡುತ್ತಾರೆ. ಅವರನ್ನು ಮಹಾರಾಷ್ಟ್ರಕ್ಕೆ ಓಡಿಸಲು ಇಲ್ಲಿರುವ ಜನರ ಅಭಿವೃದ್ಧಿಗಾಗಿ ರಚನೆಯಾಗಿರುವ ಮರಾಠ ಅಭಿವೃದ್ಧಿ ನಿಗಮವನ್ನು ನಾನು ವಿರೋಧಿಸುವುದಿಲ್ಲ. ಹಾಗೂ ನಿಗಮ ಸ್ಥಾಪನೆಗೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.