ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಪಕ್ಷಕ್ಕೆ ವಾಪಸಾಗುವ ಪ್ರಶ್ನೆಯೇ ಇಲ್ಲ: ಬಾಬುರಾವ್ ಚಿಂಚನಸೂರ್ ಸ್ಪಷ್ಟನೆ - ಯಾದಗಿರಿ ಲೆಟೆಸ್ಟ್ ನ್ಯೂಸ್

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ನಿಗಮ ಮಂಡಳಿ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ವಾಪಸ್ ಆಗಲಿದ್ದಾರೆ ಅನ್ನೋ ಮಾತಿಗೆ ಸ್ವತಃ ಚಿಂಚನಸೂರ ಅವರೇ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಹೋಗುವದಿಲ್ಲ. ಬಿಜೆಪಿ ಪಕ್ಷದಲ್ಲೇ ಇರುವೆ ಎಂದು ಹೇಳಿದ್ದಾರೆ.

i will continue in BJP : baburao chinchanasur
ಕಾಂಗ್ರೆಸ್ ಪಕ್ಷಕ್ಕೆ ವಾಪಸಾಗುವ ಪ್ರಶ್ನೆಯೇ ಇಲ್ಲ: ಬಾಬುರಾವ್ ಚಿಂಚನಸೂರ್ ಸ್ಪಷ್ಟನೆ

By

Published : Sep 2, 2020, 7:07 AM IST

ಯಾದಗಿರಿ: ಕಾಂಗ್ರೆಸ್ ಪಕ್ಷಕ್ಕೆ ವಾಪಸಾಗುವ ಪ್ರಶ್ನೆಯೇ ಇಲ್ಲ. ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ನಮ್ಮೊಂದಿಗೆ ಇದ್ದಾರೆ. ನಾನು ಕೂಡ ಬಿಜೆಪಿಯಲ್ಲೇ ಮುಂದುವರೆಯುವೆ ಎಂದು ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ನಿಗಮ ಮಂಡಳಿ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಸ್ಪಷ್ಟಪಡಿಸಿದ್ದಾರೆ.

ಬಾಬುರಾವ್ ಚಿಂಚನಸೂರ

ಯಾದಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಬಾಬುರಾವ್ ಚಿಂಚನಸೂರ, ಅಧಿಕಾರಾವಧಿ ಮಧ್ಯದಲ್ಲೇ ಸಚಿವ ಸ್ಥಾನದಿಂದ ಕೈ ಬಿಡುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ರಾಜಕೀಯವಾಗಿ ತುಳಿದಿದ್ದಾರೆ. ಹೀಗಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೆರ್ಪಡೆಯಾಗಿದ್ದೇನೆ. ನನಗೆ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರಕಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಹೊಗುವುದಿಲ್ಲ ಎಂದು ತಿಳಿಸಿದರು.

ನಾನು ಬಿಜೆಪಿ ಬಿಡುವ ಮಾತೇ ಇಲ್ಲ: ಮಾಜಿ ಸಚಿವ ಚಿಂಚನಸೂರ್

ಬಾಬುರಾವ್ ಚಿಂಚನಸೂರ ಸೇರಿದಂತೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಅನ್ನೋ ಮಾತಿಗೆ ಪ್ರತಿಕ್ರಿಯೆ ನೀಡಿದ ಚಿಂಚನಸೂರ, ಅದು ಅವರ ವೈಯಕ್ತಿಕ ವಿಚಾರ. ಒಂದು ವೇಳೆ ಅವರು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಮರಳುವ ವಿಚಾರ ಮಾಡಿದ್ರೆ, ಬಿಎಸ್​ವೈ ನೇತೃತ್ವದಲ್ಲೇ ಬಿಜೆಪಿ ಪಕ್ಷದಲ್ಲೇ ಮುಂದುವರೆಯಲು ಕೇಳಿಕೊಳ್ಳುತ್ತೇನೆ ಎಂದರು.

ಕೋಲಿ ಸಮಾಜ ಎಸ್​ಟಿಗೆ ಸೆರ್ಪಡೆ ಮಾಡುವ ವಿಚಾರವಾಗಿ ಮಾತನಾಡಿ, ಈಗಾಗಲೇ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿದ್ದೇನೆ. ಸಚಿವ ಜಗದೀಶ್ ಶಟ್ಟರ್​ಗೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ ಈ ಕೆಲಸ ಮಾಡಿಸುವುದಾಗಿ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details