ಕರ್ನಾಟಕ

karnataka

ETV Bharat / state

ಅಕ್ರಮ ಮದ್ಯ ಮಾರಾಟ ಅಂಗಡಿಗಳ ಮೇಲೆ ಪೊಲೀಸರ ದಾಳಿ - ಯಾದಗಿರಿ ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಲೇಟೆಸ್ಟ್​​ ಸುದ್ದಿ

ಹೊಸ ವರ್ಷ ಪ್ರಾರಂಭಕ್ಕೂ ಮುನ್ನವೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ILLEGAL_liquor  seller shops seized by yadgiri police
ಅಕ್ರಮ ಮದ್ಯಮಾರಾಟ ಅಂಗಡಿಗಳ ಮೇಲೆ ಪೊಲೀಸರ ದಾಳಿ

By

Published : Dec 31, 2019, 7:12 PM IST

ಯಾದಗಿರಿ:ಹೊಸ ವರ್ಷ ಪ್ರಾರಂಭಕ್ಕೂ ಮುನ್ನವೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮ ಮದ್ಯಮಾರಾಟ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದ ಎರಡು ಕಿರಾಣಿ ಅಂಗಡಿಗಳ ಮೇಲೆ ದಾಳಿ ನಡೆಸಿ ಜಿಲ್ಲೆಯ ಪೊಲೀಸರು ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದ್ದ ಬಿಯರ್ , ಓಟಿ ಸೇರಿದಂತೆ ವಿವಿಧ ಬ್ರ್ಯಾಂಡ್ ನ 48.8 ಲೀಟರ್ ಅಕ್ರಮ ಮದ್ಯ ಜಪ್ತಿ ಮಾಡಿಕೊಂಡಿದ್ದಾರೆ. ಯಾದಗಿರಿ ಜಿಲ್ಲಾ ಅಪರಾಧ ದಳದ ಸಿಪಿಐ ದೌಲತ್ ಎನ್.ಕೆ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಾದ ಸಿದ್ದಪ್ಪ, ಮತ್ತು ಹನುಮಂತ ಪರಾರಿಯಾಗಿದ್ದಾರೆ.

ಈ ಕುರಿತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಸಿದ್ದಪ್ಪ ಮತ್ತು ಹನಮಂತನ ಮೇಲೆ ಪ್ರತ್ಯೇಕವಾಗಿ ಎರಡು ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ABOUT THE AUTHOR

...view details