ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ವಲಯದಲ್ಲಿ ಸುಮಾರು 8.36 ಲಕ್ಷ ರೂ. ಮೌಲ್ಯದ 760 ಪ್ಯಾಕೇಟ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿ, ಅಕ್ಕಿ ಸಮೇತ ಲಾರಿಯನ್ನು ವಶಕ್ಕೆ ಪಡೆದರು.
ಗುರುಮಠಕಲ್ದಿಂದ ರಾಜಸ್ಥಾನಕ್ಕೆ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು, ಲಾರಿ ಸಮೇತ ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.