ಸುರಪುರ (ಯಾದಗಿರಿ): ತಾಲೂಕಿನ ಹಲವು ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಮಗಾರಿ ಹೆಸರಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆಸಲಾಗಿದೆ ಎಂದು ಶೋಷಿತರ ಪರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ್ ದೊರೆ ಆರೋಪಿಸಿದ್ದಾರೆ.
ಉದ್ಯೋಗ ಖಾತರಿ ಕಾಮಗಾರಿ ಹೆಸರಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಲವು ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತರಿ ಕಾಮಗಾರಿ ಹೆಸರಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆಸಲಾಗಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶೋಷಿತರ ಪರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ್ ದೊರೆ ಒತ್ತಾಯಿಸಿದ್ದಾರೆ.
ಸುರಪುರ: ಉದ್ಯೋಗ ಖಾತರಿ ಕಾಮಗಾರಿ ಹೆಸರಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ
ಈ ಕುರಿತು ಮಾತನಾಡಿದ ಅವರು, ತಾಲೂಕಿನ ಹಲವು ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತರಿ ಕಾಮಗಾರಿ ಹೆಸರಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ. ಕೆಲವು ಗ್ರಾಮ ಪಂಚಾಯತಿಗಳಲ್ಲಿ ಕಾರ್ಮಿಕರಿಂದ ಕಾಮಗಾರಿಗಳನ್ನ ಮಾಡಿಸದೆ, ಬೃಹತ್ ಯಂತ್ರಗಳನ್ನ ಬಳಸಿ ಕಾಮಗಾರಿ ನಡೆಸಲಾಗಿದೆ. ಇದರಿಂದ ಕೂಲಿ ಕಾರ್ಮಿಕರಿಗೆ ಉದ್ಯೋಗ ವಂಚಿತರಾಗಿದ್ದಾರೆ.
ಹೀಗಾಗಿ ಸರ್ಕಾರದ ಹಣವನ್ನ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.