ಕರ್ನಾಟಕ

karnataka

ಯಾದಗಿರಿಯಲ್ಲಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

By

Published : Dec 11, 2019, 8:37 PM IST

ಯಾದಗಿರಿ ನಿರ್ಮಿತಿ ಕೇಂದ್ರ ನಿರ್ಮಿಸಿದ ಸರ್ಕಾರಿ ಕಟ್ಟಡಗಳ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದದಿಂದ ಕೂಡಿದೆ ಎಂದು ಆರೋಪಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

protest  in yadagiri
ಜಯಕಜಯಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆರ್ನಾಟಕ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ

ಯಾದಗಿರಿ:ನಿರ್ಮಿತಿ ಕೇಂದ್ರ ನಿರ್ಮಿಸಿದ ಸರ್ಕಾರಿ ಕಟ್ಟಡಗಳ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಕಾಮಗಾರಿ ಮಾಡಿದಂತಹ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಯಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಹುಣಸಗಿ ಪಟ್ಟಣದ ತಹಶೀಲ್ದಾರ ಕಛೇರಿ ಎದುರು ಸಾಂಕೇತಿಕ ಧರಣಿ ನಡೆಸಿದ ಪ್ರತಿಭಟನಾಕಾರರು ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ನಿರ್ಮಿತಿ ಕೇಂದ್ರಗಳಿಗೆ ವಹಿಸಿದ ಅಂಗನವಾಡಿ ಕೇಂದ್ರಗಳ ಕಟ್ಟಡಗಳು, ಸಮುದಾಯ ಭವನಗಳು, ಮತ್ತು ಶಾಲಾ ಕಟ್ಟಡಗಳು, ಹುಣಸಗಿಯ ಸಾಮುದಾಯಿಕ ಶೌಚಾಲಯ, ಹುಣಸಗಿ ತಾಂಡಾದ ಅರಣ್ಯ ಕಛೇರಿ ಹಾಗೂ ಶ್ರೀನಿವಾಸಪುರ ವೈದ್ಯಾಧಿಕಾರಿಗಳ ವಸತಿ ಗೃಹಗಳು, ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಕಳಪೆ ಮತ್ತು ಅಪೂರ್ಣ ಕಾಮಗಾರಿಗಳಾಗಿದೆ. ಇದರ ಬಗ್ಗೆ ಜಿಲ್ಲಾಡಳಿತ ಸೂಕ್ತ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾರ್ಯಕರ್ತರು ಕೂಡಲೇ ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details