ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನರ್ಸಿಂಗ್, ಮೆಡಿಕಲ್ ಆಫೀಸರ್ ಸೇರಿದಂತೆ ಒಟ್ಟು 69 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗುತ್ತಿಗೆ ಅವಧಿ ಮೇರೆಗೆ ನೇಮಕವಾಗುತ್ತಿರುವ ಹುದ್ದೆಗಳಿಗೆ ಈ ಹಿಂದೆ ಅರ್ಜಿ ಸಲ್ಲಿಕೆ ದಿನಾಂಕ ಜುಲೈ 15 ಎಂದು ನಿಗದಿಪಡಿಸಲಾಗಿತ್ತು. ಆದರೆ, ಇದೀಗ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಜುಲೈ 28ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.
ಹುದ್ದೆಗಳ ವಿವರ: ಸ್ತ್ರಿ ಮತ್ತು ಪ್ರಸೂತಿ ರೋಗ ತಜ್ಞರು, ಮಕ್ಕಳ ತಜ್ಞರು, ಎಂಬಿಬಿಎಸ್ ವೈದ್ಯರು, ಪಿಸಿಷಿಯನ್, ತಾಲೂಕು ಪ್ರೋಗ್ರಾಂ ಮ್ಯಾನೇಜರ್, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ, ವೈದ್ಯಕೀಯ ಅಧಿಕಾರಿಗಳು, ನರ್ಸ್ ಅಫೀಸರ್, ಪ್ರಯೋಗಾಲಯ ಸಹಾಯಕರು, ಆಯುಷ್ ವೈದ್ಯರು, ಆಡಿಯೋಲಾಜಿಸ್ಟ್, ಡಯಟ್ ಕೌನ್ಸಿಲರ್, ಸೈಕಿಯಾಟ್ರಿಸ್ಟ್,
ವಿದ್ಯಾರ್ಹತೆ ಏನು?: ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳು ವೈದ್ಯಕೀಯ ಪದವಿ, ಬಿಎಸ್ಸಿ ನರ್ಸಿಂಗ್, ಲ್ಯಾಬ್ ಟೆಕ್ನಿಶಿಯನ್ ಹುದ್ದೆಗೆ ಪಿಯುಸಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಗರಿಷ್ಠ 40 ರಿಂದ 70 ವರ್ಷ.
ಆಯ್ಕೆ ಹೇಗೆ?: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ, ಮೆರಿಟ್ ಪಟ್ಟಿ, ಸಂದರ್ಶನದ ಮೂಲಕ ಆಯ್ಕೆ.