ಸುರಪುರ(ಯಾದಗಿರಿ):ಹುಣಸಗಿ ತಾಲೂಕಿನ ಕಕ್ಕೇರಾದಲ್ಲಿ ಕೊರೊನಾ ಸೋಂಕಿಗೆ ಪತ್ರಕರ್ತ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಕ್ಕೇರಾದಲ್ಲಿ ದಶಕಕ್ಕೂ ಹೆಚ್ಚು ಕಾಲ ರಾಜ್ಯದ ಹೆಸರಾಂತ ಪತ್ರಿಕೆಯೊಂದರ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಪತ್ರಕರ್ತ ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ. ಮೃತ ಪತ್ರಕರ್ತರಿಗೆ 52 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಕೆಮ್ಮು ಜ್ವರದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.