ಯಾದಗಿರಿ:ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರನ್ನ ಖಾಯಂಗೊಳಿಸಬೇಕೆಂದು ಆಗ್ರಹಿಸಿ ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರು ಪ್ರತಿಭಟನೆ ನಡೆಸಿದರು.
ಹುದ್ದೆ ಖಾಯಂಗೆ ಆಗ್ರಹ: ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರಿಂದ ಪ್ರತಿಭಟನೆ - ಯಾದಗಿರಿ ಪ್ರತಿಭಟನೆ ಸುದ್ದಿ
ತಮ್ಮ ಹುದ್ದೆಗಳನ್ನು ಖಾಯಂ ಮಾಡುವುದರ ಜೊತೆಗೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರು ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಆರೋಗ್ಯ ಇಲಾಖೆ ಎದರು ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಿದರು. ಕೂಡಲೇ ಸರ್ಕಾರ ತಮ್ಮ ಹುದ್ದೆಗಳನ್ನು ಖಾಯಂ ಮಾಡುವುದರ ಜೊತೆಗೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಕೊರೊನಾ ಆತಂಕದ ನಡುವೆ ಯಾವುದೇ ರಜೆ ತೆಗೆದುಕೊಳ್ಳದೇ ನಮ್ಮ ಸೇವೆ ಮುಂದುವರೆಸಿದ್ದು, ನಮ್ಮ ಕುಟುಂಬ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಹೀಗಾಗಿ ನಮ್ಮ ಬೇಡಿಕೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ, ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಕೆಲಸಕ್ಕೆ ಗೈರಾಗುವ ಮೂಲಕ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.