ಕರ್ನಾಟಕ

karnataka

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ರೂ ಆಧಾರ್ ಕಾರ್ಡ್ ಮೂಲಕ ಆಹಾರ ಧಾನ್ಯ ವಿತರಿಸಬೇಕು: ಸಚಿವ ಗೋಪಾಲಯ್ಯ

ಪ್ರತಿಯೊಬ್ಬರಿಗೂ ಪಡಿತರ ತಲುಪುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಆತ್ಮ ನಿರ್ಭರ ಭಾರತ ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಪಡಿತರ ಆಹಾರ ಧಾನ್ಯ ಬಿಡುಗಡೆ ಮಾಡಿದೆ ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

By

Published : Jun 11, 2020, 9:55 PM IST

Published : Jun 11, 2020, 9:55 PM IST

K Gopalya
ಕೆ.ಗೋಪಾಲಯ್ಯ

ಯಾದಗಿರಿ:ಲಾಕ್‍ಡೌನ್ ಕಾರಣ ಜಿಲ್ಲೆಗೆ ವಾಪಸಾದ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ ಅವರ ಆಧಾರ್ ಕಾರ್ಡ್ ಮೂಲಕ ಆಹಾರ ಧಾನ್ಯ ವಿತರಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಕೆ.ಗೋಪಾಲಯ್ಯ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು ಆತ್ಮ ನಿರ್ಭರ ಭಾರತ ಯೋಜನೆಯಡಿ ಪಡಿತರ ವಿತರಣೆಯ ಸಮರ್ಪಕ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಪಡಿತರ ತಲುಪುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಆತ್ಮ ನಿರ್ಭರ ಭಾರತ ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಪಡಿತರ ಆಹಾರ ಧಾನ್ಯ ಬಿಡುಗಡೆ ಮಾಡಿದೆ. ಹೊರ ರಾಜ್ಯದಿಂದ ಹಾಗೂ ಬೇರೆ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ವಾಪಸಾದ ಕಾರ್ಮಿಕರಿಗೆ ಆಧಾರ್ ಕಾರ್ಡ್ ಮುಖಾಂತರ 10 ಕೆಜಿ ಅಕ್ಕಿ ಹಾಗೂ ಎರಡು ಕೆಜಿ ಬೇಳೆ ವಿತರಿಸಬೇಕು ಎಂದು ತಿಳಿಸಿದರು. ರಾಜ್ಯದಲ್ಲಿ 40 ಲಕ್ಷ ಜನರಿಗೆ ಆಹಾರ ಧಾನ್ಯ ವಿತರಿಸುವ ಗುರಿ ಇದ್ದು, ನ್ಯಾಯಬೆಲೆ ಅಂಗಡಿಗಳಿಂದ ದೂರವಿರುವ ಹಳ್ಳಿಗಳಿಗೆ ತೆರಳಿ ಪಡಿತರ ಧಾನ್ಯ ವಿತರಿಸಬೇಕು. ಹೆಚ್ಚಿನ ಪಡಿತರ ಧಾನ್ಯದ ಅವಶ್ಯಕತೆ ಇದ್ದಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವರು ನಿರ್ದೇಶನ ನೀಡಿದರು. ಗುಣಮಟ್ಟದ ಆಹಾರ ಧಾನ್ಯ ಸರಬರಾಜು ಮಾಡದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಧಾನಮಂತ್ರಿ ಉಜ್ವಲ್ ಯೋಜನೆ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿಯಲ್ಲಿ ಮೂರು ತಿಂಗಳವರೆಗೆ ಉಚಿತ ಗ್ಯಾಸ್ ನೀಡಲಾಗಿದೆ. ವಿಶೇಷವಾಗಿ ಯಾದಗಿರಿ ಜಿಲ್ಲೆಗೆ 2,500 ಗ್ಯಾಸ್ ಕನೆಕ್ಷನ್‍ ಹೆಚ್ಚುವರಿಯಾಗಿ ಕೊಡಲಾಗಿದ್ದು, ಅದನ್ನು ಬಡವರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಆಹಾರ ಧಾನ್ಯ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ಸುಸಜ್ಜಿತ ಗೋದಾಮು ನಿರ್ಮಾಣ ಮಾಡಲು 5 ಎಕರೆ ಜಮೀನು ಮಂಜೂರು ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಆಹಾರ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ABOUT THE AUTHOR

...view details