ಯಾದಗಿರಿ: ಅಕ್ರಮ ಹತ್ತಿ ಖರೀದಿ ಕೇಂದ್ರಗಳ ಮೇಲೆ ಅಧಿಕಾರಿಗಳು ಸೂಕ್ತ ಕ್ರಮ ಜರಗಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಶಹಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಎದರು ಅನಿರ್ದಿಷ್ಟಾವಧಿ ಸತ್ಯಗ್ರಹ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದರಿಯಲ್ಲಿ ಅನಧಿಕೃತ ಹತ್ತಿ ಕೇಂದ್ರ ಸ್ಥಾಪನೆ ಖಂಡಿಸಿ ಕರವೇ ಪ್ರತಿಭಟನೆ - ಅನಧಿಕೃತ ಹತ್ತಿ ಖರೀದಿ ಕೇಂದ್ರಗಳ ತಡೆಗಟ್ಟುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ
ರಾಜ್ಯ ಹೆದ್ದಾರಿ ಸೇರಿದಂತೆ ರಾಷ್ಟ್ರೀಯ ಹೆದ್ದರಿಗಳ ಮೇಲೆ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳು ಸ್ಥಾಪನೆಯಾಗಿದ್ದು, ಇವನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಯಾದಗಿರಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಹೆದ್ದಾರಿ ಸೇರಿದಂತೆ ರಾಷ್ಟ್ರೀಯ ಹೆದ್ದರಿಗಳ ಮೇಲೆ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳು ಸ್ಥಾಪನೆಯಾಗುವ ಮೂಲಕ ದಲ್ಲಾಳಿಗಳು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದರು. ಅಕ್ರಮ ಹತ್ತಿ ಖರೀದಿ ಕೇಂದ್ರಗಳ ವಿರುದ್ಧ ಕ್ರಮಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರು ಬೆಳೆದ ಹತ್ತಿ ಬೆಳೆ ಮಹಾರಾಷ್ಟ್ರ, ಗುಜರಾತ್, ಹರಿಯಾಣ ರಾಜ್ಯಗಳ ಪಾಲಾಗುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಇದನ್ನು ತಡೆಗಟ್ಟಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಆವರಣದಲ್ಲೇ ಹತ್ತಿ ಖರೀದಿ ಕೇಂದ್ರ ಸ್ಥಾಪನೆ ಮಾಡಿ ರೈತರಿಗೆ ಅನಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ತಮ್ಮ ಅನಿರ್ದಿಷ್ಟಾವಧಿ ಸತ್ಯಗ್ರಹ ಮುಂದುವರೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
TAGGED:
Karave protest in kalburagi