ಸುರಪುರ :ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೂರ ಗ್ರಾಮದಲ್ಲಿ ಇಬ್ಬರು ದಲಿತ ಸಮುದಾಯದ ವ್ಯಕ್ತಿಗಳ ಕೊಲೆಯಾಗಿದೆ. ಕೊಲೆಯ ಆರೋಪಿಗಳನ್ನು ಬಂಧಿಸದೆ ಪೊಲೀಸರು ದಲಿತ ಸಂಘರ್ಷ ಸಮಿತಿ ಭೀಮವಾದ ಮುಖಂಡರ ಮೇಲೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಕೆಂಭಾವಿ ಪಟ್ಟಣದಲ್ಲಿ ಪ್ರತಿಭಟನೆ - ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಕೆಂಭಾವಿ ಪಟ್ಟಣದಲ್ಲಿ ಪ್ರತಿಭಟನೆ
ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪ್ರತಿಭಟನೆ ನಡೆಸಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಖಂಡನಿಯವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಬಾದಾಮಿ ಮತ್ತು ಹುನಗುಂದ ತಾಲೂಕಿನ ಗ್ರಾಮದಲ್ಲಿ ದಲಿತರ ಮೇಲೆ ನಿತ್ಯವೂ ಕೂಡ ಹಲ್ಲೆಗಳು ನಡೆಯುತ್ತಿವೆ. ಇದನ್ನು ಕಂಡು ಕೂಡ ಸರ್ಕಾರದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮತ್ತು ಬಾದಾಮಿ ಕ್ಷೇತ್ರದ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರ ಬಗ್ಗೆ ನಿರ್ಲಕ್ಷ ತೋರುತ್ತಿರುವುದರಿಂದ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ನಡೆಯುವ ದಲಿತರ ಮೇಲಿನ ದೌರ್ಜನ್ಯಗಳಿಗೆ ಸರ್ಕಾರ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.