ಯಾದಗಿರಿ:ಸಚಿವ ಮುರುಗೇಶ್ ನಿರಾಣಿ ಅವರೇ ದೊಡ್ಡ ನಾಲಾಯಕ್, ಅವರಿಗೆ ಅಧಿಕಾರದ ಹುಚ್ಚು ಹಿಡಿದಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ತಿರುಗೇಟು ನೀಡಿದ್ದಾರೆ.
ನಗರದ ಖಾಸಗಿ ಹೋಟೆಲ್ವೊಂದರಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮಾಜದ ಬಗ್ಗೆ ನಿರಾಣಿಯವರಿಗೆ ಕಳಕಳಿ ಇಲ್ಲ. ನನ್ನ ಬಗ್ಗೆ ಸ್ವಾಮೀಜಿಯವರ ಬಗ್ಗೆ ಅತೀ ಕೀಳಾಗಿ ಮಾತನಾಡಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೀರಿ, ಪಂಚಮಸಾಲಿ ಮೀಸಲಾತಿ ಬಗ್ಗೆ ವರದಿ ತರಿಸಿಕೊಂಡು 6 ತಿಂಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ಸಿಎಂ ಸದನದಲ್ಲಿ ಭರವಸೆ ನೀಡಿದ್ದಾರೆ. ಸರ್ಕಾರದಲ್ಲಿ ಮಂತ್ರಿ ದೊಡ್ಡವರಾ? ಮುಖ್ಯಮಂತ್ರಿ ದೊಡ್ಡವರಾ? ಎಂದು ಪ್ರಶ್ನಿಸಿದರು.