ಸುರಪುರ(ಯಾದಗಿರಿ):ಜುಲೈ 2ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷರ ಮತ್ತಿತರೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಡೇವಿಡ್ ಸೀಮಿಯಾನ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು.
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆ.. ಸುರಪುರದಲ್ಲಿ ಕಾಂಗ್ರೆಸ್ ಮುಖಂಡರ ಸಭೆ - Surapura latest news
ಪದಗ್ರಹಣ ಕಾರ್ಯಕ್ರಮದ ಕುರಿತು ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ತಾಲೂಕಿನ ವಿವಿಧ ಕಡೆಗಳಲ್ಲಿ ಆಯೋಜಿಸಬೇಕಾದ ವಿಡಿಯೋ ಕಾನ್ಫರೆನ್ಸ್ ಆಯೋಜನೆಯ ಕುರಿತು ಚರ್ಚೆ..

ತಾಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಜುಲೈ 2ರಂದು ಬೆಂಗಳೂರಿನಲ್ಲಿ ನಡೆಯುವ ಡಿ ಕೆ ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ್ ಇವರೆಲ್ಲರ ಪ್ರತಿಜ್ಞಾ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಕೋ-ಆರ್ಡಿನೇಟರ್ ಹಾಗೂ ಮಾಜಿ ಸಭಾಪತಿಗಳು ಮತ್ತು ಮಾಜಿ ಎಮ್ಎಲ್‌ಸಿ ಡೇವಿಡ್ ಸಿಮೆಯೋನ್ ಅವರು ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಈ ವೇಳೆ ಪದಗ್ರಹಣ ಕಾರ್ಯಕ್ರಮದ ಕುರಿತು ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ತಾಲೂಕಿನ ವಿವಿಧ ಕಡೆಗಳಲ್ಲಿ ಆಯೋಜಿಸಬೇಕಾದ ವಿಡಿಯೋ ಕಾನ್ಫರೆನ್ಸ್ ಆಯೋಜನೆಯ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಮಾಜಿ ರಾಜಾ ವೆಂಕಟಪ್ಪ ನಾಯಕ, ಅವರ ಸುಪುತ್ರ ರಾಜಾ ಸಂತೋಷ್ ನಾಯಕ್ ಮತ್ತು ಅಪೆಕ್ಸ್ ಬ್ಯಾಂಕ್ ನಿರ್ದೇಶಕ ವಿಠ್ಠಲ್ ಯಾದವ್, ಕೆಪಿಸಿಸಿ ಕಾರ್ಯದರ್ಶಿಗಳಾದ ಅಬ್ದುಲ್ ಅಲಿಂ ಗೋಗಿ, ಕೆಪಿಸಿಸಿ ವಾಲ್ಮೀಕಿ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ದೊರೆ, ಸುರಪುರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಿಂಗರಾಜ್ ಬಾಚಿಮಟ್ಟಿ, ಹುಣಸಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೌಡಪ್ಪಗೌಡ, ಯಾದಗಿರಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ದಾವೂದ್ ಇಬ್ರಾಹಿಂ ಪಠಾಣ್, ತಾಲೂಕಿನ ಸೋಷಿಯಲ್ ಮೀಡಿಯಾ ಅಧ್ಯಕ್ಷರಾದ ಪರಶುರಾಮ್ ನಾಯಕ್, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಅಬ್ದುಲ್ ಗಫಾರ್ ನಗನೂರಿ ಮತ್ತು ಮಹಿಬೂಬ್ ಒಂಟಿ ಹಾಗೂ ನಗರಸಭೆ ಸದಸ್ಯರುಗಳು, ಗ್ರಾಮ ಪಂಚಾಯತ್ ಸದಸ್ಯರಗಳು, ತಾಲೂಕು ಪಂಚಾಯತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಯುವ ಕಾರ್ಯಕರ್ತ ಪಾಲ್ಗೊಂಡಿದ್ದರು.