ಯಾದಗಿರಿ:ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಸಾರಿಗೆ ಸಂಸ್ಥೆ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಪಿಯಾದ ಪರಿಣಾಮ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಪಲ್ಟಿ: ಎಂಟು ಜನರಿಗೆ ಗಂಭೀರ ಗಾಯ - ಮದ್ರಿಕಿ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿ
ಸಾರಿಗೆ ಸಂಸ್ಥೆ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಪಿಯಾದ ಪರಿಣಾಮ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.
ಬಸ್ ಪಲ್ಟಿ
ಶಹಪುರ ಪಟ್ಟಣದಿಂದ ಶ್ರೀರಂಗಪಟ್ಟಣ ಹೆದ್ದಾರಿ ಮಾರ್ಗವಾಗಿ ಕಲಬುರಗಿ ಕಡೆ ಹೊರಟಂತಾ ಕೆಎಸ್ಆರ್ಟಿಸಿ ಬಸ್ ಎದುರು ಬಂದ ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ ಚಾಲಕ ನಾಗಪ್ಪ ಸೇರಿದಂತೆ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬೈಕ್ ಸವಾರ ಬದುಕುಳಿದಿದ್ದಾನೆ.
ಈ ಕುರಿತು ಭೀಮರಾಯನ ಗುಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.