ಯಾದಗಿರಿ: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಜನರ ಮೇಲೆ ಲಾರಿ ಹರಿದಿದ್ದು, ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಗಾಯಗೊಂಡ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಬಸ್ ನಿಲ್ದಾಣದ ಮುಂದೆ ನಿಂತಿದ್ದವರ ಮೇಲೆ ಹರಿದ ಲಾರಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ಅಪಘಾತ ಜರುಗಿದೆ. ಹೈದರಾಬಾದ್ನಿಂದ ಬೆಳಗಾವಿಗೆ ಹೋಗುತ್ತಿದ್ದ ಹಣ್ಣು ತುಂಬಿದ ಲಾರಿ ಗುರುಮಠಕಲ್ ಬಸ್ ನಿಲ್ದಾಣದ ಎದುರು ನಿಂತಿದ್ದ ಜನರ ಮೇಲೆ ಹರಿದಿದೆ.
ಈ ವೇಳೆ ಮೋನಿಕಾ(3) ಎಂಬ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತ ಸಂಭವಿಸಿದ ಬಳಿಕ ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ ಹೈವೇ ಪೆಟ್ರೋಲಿಂಗ್ ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.