ಸುರಪುರ(ಯಾದಗಿರಿ):ವಿವಿಧ ಬೇಡಿಕೆಗಳ ಈಡೇರಿಕೆಗೆಗೆ ಒತ್ತಾಯಿಸಿ ತಾಲೂಕು ಮಾದಿಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಮಾದಿಗ ಸಮುದಾಯದ ಜನರ ಮೇಲೆ ಅನೇಕ ಗ್ರಾಮಗಳಲ್ಲಿ ಹಲ್ಲೆ ನಡೆದಿದೆ. ಅಲ್ಲದೆ ಗ್ರಾಮಗಳಲ್ಲಿ ಇನ್ನೂ ಅಸ್ಪೃಶ್ಯತೆ ಆಚರಣೆ ಮಾಡಲಾಗುತ್ತಿದೆ. ದೇವಿಕೆರಾ ಗ್ರಾಮದಲ್ಲಿ ಕಿಡೆಗೇಡಿಗಳಿಂದ ಉಂಟಾಗಿರುವ ನಾಮಫಲಕಕ್ಕೆ ಸಂಬಂಧಿಸಿದ ಗೊಂದಲವನ್ನು ಬಗೆಹರಿಸಿ ಕಿಡಿಗೇಡಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮುಖಂಡ ಭೀಮಾಶಂಕರ ಬಿಲ್ಲವ್ ಮನವಿ ಪತ್ರ ಓದಿ, ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ನಂತರ ಈ ಕುರಿತಂತೆ ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ಹಾಗೂ ಪಿಐ ಎಸ್.ಎಂ.ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.