ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿ ಕೊರೊನಾ ತಡೆಗಟ್ಟುವ ಕ್ರಮಗಳ ಬಗ್ಗೆ ಡಿಸಿ ಕಚೇರಿಯಲ್ಲಿ ಸಭೆ - Meeting at Yadagiri DC office

ಯಾದಗಿರಿಯಲ್ಲಿ ಕೋವಿಡ್-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ನೇತೃತ್ವದಲ್ಲಿ ಸಭೆ ನಡೆಯಿತು.

Meeting at Yadagiri DC office
ಯಾದಗಿರಿಯಲ್ಲಿ ಕೊರೊನಾ ತಡೆಗಟ್ಟುವ ಕ್ರಮಗಳ ಬಗ್ಗೆ ಡಿಸಿ ಕಚೇರಿಯಲ್ಲಿ ಸಭೆ

By

Published : May 12, 2020, 9:49 PM IST

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಶ್ರೀಧರ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಜರುಗಿತು.

ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾರಾವ್ ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು. ಹೊರ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರನ್ನು ಇನ್‍ಸ್ಟಿಟ್ಯೂಷನಲ್ ಕ್ವಾರಂಟೈನ್‍ನಲ್ಲಿ ಇರಿಸಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ಇವರ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ್ ಅರ್ಜುನ ಬನಸೋಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಉಪಸ್ಥಿತರಿದ್ದರು.

ABOUT THE AUTHOR

...view details