ಯಾದಗಿರಿ:ಜಿಲ್ಲೆಯ ಕೃಷ್ಣಾ ನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಾದಗಿರಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಭು ಚೌವ್ಹಾಣ ಭೇಟಿ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚು ನೀರು ಬಿಟ್ಟಿದ್ದರಿಂದ ಮುಳಗುವ ಭೀತಿಯಲ್ಲಿದ್ದ ಕೊಳ್ಳುರು ಸೇತುವೆಗೆ ಸಚಿವ ಪ್ರಭು ಚೌವ್ಹಾಣ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಕೊಳ್ಳುರ ( ಎಂ ) ಬ್ರಿಡ್ಜ್ಗೆ ಸಚಿವ ಪ್ರಭು ಚೌವ್ಹಾಣ ಭೇಟಿ ನೀಡಿದರು. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚು ನೀರು ಬಿಟ್ಟಿದ್ದರಿಂದ ಮುಳಗುವ ಭೀತಿಯಲ್ಲಿದ್ದ ಕೊಳ್ಳುರು ಸೇತುವೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಮುಖ್ಯ ಸೇತುವೆಯನ್ನ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದೇ ವೇಳೆ ಪ್ರವಾಹ ಪಿಡೀತ ಗ್ರಾಮಸ್ಥರು ಸಚಿವ ಪ್ರಭು ಚೌವ್ಹಾಣ ಅವರ ಮುಂದೆ ಹಲವು ಸಮಸ್ಯೆಗಳನ್ನು ತೋಡಿಕೊಂಡರು. ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಶಾಸಕ ವೆಂಕಟರೆಡ್ಡಿ ಮುದ್ನಾಳ ತರಾಟೆಗೆ ತೆಗೆದುಕೊಂಡರು. ಸಚಿವ ಪ್ರಭು ಚೌವ್ಹಾಣಗೆ ಸಂಸದ ಅಮರೇಶ್ವರ ನಾಯಕ, ಶಾಸಕ ವೆಂಕಟರೆಡ್ಡಿ ಮುದ್ನಾಳ ಸೇರಿದಂತೆ ಅಧಿಕಾರಿಗಳು ಸಾಥ್ ನೀಡಿದರು.