ಯಾದಗಿರಿ: ಯಾದಗಿರಿ ಜಿಲ್ಲೆಯನ್ನು ರಚಿಸಿದ್ದು ಮಾಜಿ ಮುಖ್ಯಮಂತ್ರಿ ಜೆ.ಹೆಚ್. ಪಟೇಲ್ ಎಂಬ ಹೇಳಿಕೆ ನೀಡುವ ಮೂಲಕ ಸಚಿವ ವಿ.ಸೋಮಣ್ಣ ಯಡವಟ್ಟು ಮಾಡಿಕೊಂಡಿದ್ದಾರೆ.
ಯಾದಗಿರಿ ಜಿಲ್ಲೆಯನ್ನಾಗಿಸಿದ್ದವರ ಹೆಸರು ಬದಲಿಸಿ ಯಡವಟ್ಟು ಮಾಡಿಕೊಂಡ ಸಚಿವ ಸೋಮಣ್ಣ..! - those who made Yadagiri district
ಯಾದಗಿರಿಯನ್ನು ನೂತನ ಜಿಲ್ಲೆಯನ್ನಾಗಿ ಮಾಡಿದ್ದು ಮಾಜಿ ಮುಖ್ಯಮಂತ್ರಿ ಜೆ.ಹೆಚ್. ಪಟೇಲ್. ಆಗ ನಾನು ಮಂತ್ರಿಯಾಗಿದ್ದೆ ಎಂದು ಸಚಿವ ವಿ.ಸೋಮಣ್ಣ ಹೇಳುತ್ತಿದ್ದಂತೆ ಪಕ್ಕದಲ್ಲಿ ಕುಳಿತವರು ಯಾದಗಿರಿ ಜಿಲ್ಲೆಯನ್ನು ರಚನೆ ಮಾಡಿದ್ದು ಬಿ.ಎಸ್. ಯಡಿಯೂರಪ್ಪನವರು ಎಂದು ತಿಳಿ ಹೇಳಿದರು. ತಕ್ಷಣ ಸೋಮಣ್ಣ ಮಾಡಿಕೊಂಡಿದ್ದ ಯಡವಟ್ಟನ್ನು ಸರಿಪಡಿಸಿಕೊಂಡರು.
ಸಚಿವ ಸೋಮಣ್ಣ
ಜಿಲ್ಲೆಯ ಶಹಪುರ ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಲಾಗಿದ್ದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಚಿವ ವಿ.ಸೋಮಣ್ಣ ಮತ್ತು ಡಿಸಿಎಂ ಲಕ್ಷ್ಮಣ ಸವದಿ ನಗರದ ಖಾಸಗಿ ಹೋಟಲ್ವೊಂದರಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಯಾದಗಿರಿಯನ್ನು ನೂತನ ಜಿಲ್ಲೆಯನ್ನಾಗಿ ಮಾಡಿದ್ದು ಮಾಜಿ ಮುಖ್ಯಮಂತ್ರಿ ಜೆ.ಹೆಚ್. ಪಟೇಲ್. ಆಗ ನಾನು ಮಂತ್ರಿಯಾಗಿದ್ದೆ ಎಂದು ಹೇಳಿಕೆ ನೀಡುತ್ತಿದ್ದಂತೆ ಪಕ್ಕದಲ್ಲಿ ಕುಳಿತವರು ಯಾದಗಿರಿ ಜಿಲ್ಲೆಯನ್ನು ರಚನೆ ಮಾಡಿದ್ದು ಬಿ.ಎಸ್. ಯಡಿಯೂರಪ್ಪನವರು ಎಂದು ತಿಳಿಹೇಳಿದರು. ಬಳಿಕ ತಮ್ಮ ಹೇಳಿಕೆಯನ್ನು ಬದಲಾಯಿಸಿಕೊಂಡರು.