ಯಾದಗಿರಿ: ರಾಜ್ಯದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ, ಯಾದಗಿರಿಯ ಸುರಪುರ ಕ್ಷೇತ್ರದ ಶಾಸಕ ರಾಜುಗೌಡ ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಮತದಾರ ಪ್ರಭುವಿಗೆ ಧನ್ಯವಾದ ಅರ್ಪಿಸಿದ ಶಾಸಕ ರಾಜುಗೌಡ - ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು
ಉಪ ಚುನಾವಣೆಯಲ್ಲಿ ಬಿಜೆಪಿ 15ರಲ್ಲಿ 12 ಸ್ಥಾನ ಗಳಿಸಿದ್ದು, ಸುರಪುರ ಶಾಸಕ ರಾಜುಗೌಡ ಸಾಮಾಜಿಕ ಜಾಲತಾಣದ ಮೂಲಕ ಮತದಾರರಿಗೆ ಅಭಿನಂದನೆ ಅರ್ಪಿಸಿದ್ದಾರೆ.
![ಮತದಾರ ಪ್ರಭುವಿಗೆ ಧನ್ಯವಾದ ಅರ್ಪಿಸಿದ ಶಾಸಕ ರಾಜುಗೌಡ MLA Raju Gowda thanked](https://etvbharatimages.akamaized.net/etvbharat/prod-images/768-512-5317703-thumbnail-3x2-vicky.jpg)
ಮತದಾರರಿಗೆ ಧನ್ಯವಾದ ಅರ್ಪಿಸಿದ ರಾಜುಗೌಡ
ಮತದಾರರಿಗೆ ಧನ್ಯವಾದ ಅರ್ಪಿಸಿದ ರಾಜುಗೌಡ
ಮತದಾರರು ಹೆಚ್ಚಿನ ಸ್ಥಾನದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಬಿಎಸ್ವೈ ಅವರಿಗೆ ಸುಭದ್ರ ಸರ್ಕಾರ ನಡೆಸಲು ಅವಕಾಶ ಕಲ್ಪಿಸಿದ್ದಾರೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಮೇಲೆ ವಿಶ್ವಾಸವಿಟ್ಟು, 15 ಸ್ಥಾನಗಳಲ್ಲಿ ನಡೆದಂತಹ ಚುನಾವಣೆಯಲ್ಲಿ 12 ಕ್ಷೇತ್ರದಲ್ಲಿ ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ. ಸುಭದ್ರ ಸರ್ಕಾರ ನಡೆಯಲು ಮತದಾರ ಪ್ರಭು ಅವಕಾಶ ಕಲ್ಪಿಸಿದ್ದಕ್ಕೆ ಅಭಿನಂದನೆ ಎಂದು ರಾಜುಗೌಡ ಹೇಳಿದ್ದಾರೆ.