ಕರ್ನಾಟಕ

karnataka

ETV Bharat / state

ಮಾಸ್ಕ್​ ಧರಿಸಿಕೊಂಡು ಕೆಲಸದಲ್ಲಿ ತೊಡಗಿಸಿಕೊಳ್ಳಿ: ಶಾಸಕ ರಾಜುಗೌಡ ಸಲಹೆ - ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ

ಎಂಎನ್ಆರ್​ಇಜಿಎಸ್​ ಅಡಿ ಕೆಲಸ ಮಾಡುತ್ತಿರುವ ಕೆಲಸಗಾರರನ್ನು ಭೇಟಿ ಮಾಡಿ ಬಳಿಕ ಮಾತನಾಡಿದ ಶಾಸಕ ರಾಜುಗೌಡ, ತಾವೆಲ್ಲರೂ ಕೊರೊನಾ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿದ್ದೀರಿ, ಹೀಗಾಗಿ ಸದಾಕಾಲ ಮುಖಕ್ಕೆ ಮಾಸ್ಕ್ ಹಾಗೂ ಕೈಗಳಿಗೆ ಸ್ಯಾನಿಟೈಸರ್ ಹಾಕಿಕೊಳ್ಳಿ ಎಂದು ಮನವಿ ಮಾಡಿದರು.

MLA Raju Gowda visits and inspects the Rural Employment Guarantee Scheme at surapura
ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜುಗೌಡ ಭೇಟಿ

By

Published : May 29, 2020, 7:32 PM IST

Updated : May 29, 2020, 10:08 PM IST

ಸುರಪುರ:ಹುಣಸಗಿ ತಾಲೂಕಿನ ಬಲಶೆಟ್ಟಿಹಾಳ್ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಎಂಎನ್ಆರ್​ಇಜಿಎಸ್) ನಡೆಯುತ್ತಿರುವ ಬದು ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಶಾಸಕ ನರಸಿಂಹನಾಯಕ ರಾಜುಗೌಡ ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಅವರು, ತಾವೆಲ್ಲರೂ ಕೊರೊನಾ ಸಂಕಷ್ಟದಲ್ಲಿಯೂ ಕೆಲಸದಲ್ಲಿ ತೊಡಗಿದ್ದೀರಿ. ಯಾವಾಗಲೂ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಿ. ಆಗಾಗ ಕೈಗಳಿಗೆ ಸ್ಯಾನಿಟೈಸರ್ ಹಚ್ಚಿಕೊಳ್ಳಿ ಎಂದು ಮನವಿ ಮಾಡಿದರು.

ಉದ್ಯೋಗ ಖಾತರಿ ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣವೇ ನನ್ನ ಗಮನಕ್ಕೆ ತರಬಹುದು. ಈಗಾಗಲೇ ಎಲ್ಲಾ ಕಾರ್ಮಿಕರಿಗೆ ಸರ್ಕಾರ ಉಚಿತ ಆಹಾರ ಧಾನ್ಯಗಳನ್ನು ನೀಡುತ್ತಿದೆ. ಅವುಗಳನ್ನು ಪಡೆದುಕೊಳ್ಳಬೇಕು ಎಂದರು.

Last Updated : May 29, 2020, 10:08 PM IST

ABOUT THE AUTHOR

...view details