ಸುರಪುರ: ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿನ ಬಸವ ಸಾಗರ ಜಲಾಶಯಕ್ಕೆ ಶಾಸಕ ರಾಜುಗೌಡ (ನರಸಿಂಹ ನಾಯಕ) ಇಂದು ಭೇಟಿ ನೀಡಿದರು.
ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣದಿಂದ ಕೃಷ್ಣಾ ನದಿಗೆ ಒಳ ಹರಿವು ಹೆಚ್ಚಾಗಿದ್ದು ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯ ತುಂಬುತ್ತಿದ್ದು, ನದಿಗೆ ನೀರು ಹರಿಬಿಟ್ಟಿದ್ದರಿಂದ ನಾರಾಯಣಪುರ ಜಲಾಶಯಕ್ಕೂ ಒಳ ಹರಿವು ಹೆಚ್ಚಾಗಿದೆ. ಇದರಿಂದ ಡ್ಯಾಂ ಭರ್ತಿಯಾಗುತ್ತಿದ್ದುದರಿಂದ ನದಿಗೆ ನೀರು ಹರಿಬಿಡಲಾಗುತ್ತಿದೆ.