ಗುರುಮಠಕಲ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಪಾರ ಪ್ರಮಾಣದ ಕಬ್ಬಿನ ಗದ್ದೆ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಸಂಭವಿಸಿದೆ.
ಗುರುಮಠಕಲ್ನಲ್ಲಿ ಹತ್ತು ಎಕರೆ ಕಬ್ಬಿಗೆ ಬೆಂಕಿ ರಮೇಶ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದ್ದು, ಸುಮಾರು 10 ಎಕರೆ ಕಬ್ಬು ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಇದನ್ನೂ ಓದಿ: ಕೊರೊನಾ ಮರಣ ಮೃದಂಗ.. ರಾಜ್ಯದಲ್ಲಿಂದು ಸೋಂಕಿಗೆ 70 ಮಂದಿ ಸಾವು!
ಕಾರ್ಮಿಕರ ನೆಪ ಹೇಳಿ ಕಾರ್ಖಾನೆಯವರು ವಿಳಂಬ ಮಾಡಿದ್ದರಿಂದ ಕಟಾವಿಗೆ ಬಂದಿದ್ದ ಕಬ್ಬು ನಷ್ಟವಾಯಿತು ಎಂದು ರೈತ ರಮೇಶ್ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆ ನಿಷ್ಕಾಳಜಿ ವಿರುದ್ಧ ಆಕ್ರೋಶ ಹೊರಹಾಕಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ