ಯಾದಗಿರಿ: ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಯಿಂದ ಎಪಿಎಂಸಿ ಮುಚ್ಚಲು ಸಾಧ್ಯವಿಲ್ಲ. ಮುಂದೆಯೂ ಎಪಿಎಂಸಿ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಅಂತಾ ರಾಯಚೂರು ಸಂಸದ ಅಮರೇಶ್ವರ ನಾಯಕ ತಿಳಿಸಿದರು.
ತಿದ್ದುಪಡಿ ಕಾಯ್ದೆಯಿಂದ ಎಪಿಎಂಸಿ ಮುಚ್ಚಲ್ಲ..ಸಂಸದ ರಾಜಾ ಅಮರೇಶ್ವರ್ ನಾಯಕ - ಸಂಸದ ರಾಜಾ ಅಮರೇಶ್ವರ್ ನಾಯಕ
ಎಪಿಎಂಸಿ, ಭೂ ಸುಧಾರಣಾ ಕಾಯ್ದೆಗಳು ಜಾರಿಯಾಗುತ್ತಿದ್ದಂತೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಹಾಗಾಗಿ ಈ ಕಾಯ್ದೆಯ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಅರಿವು ಮೂಡಿಸಬೇಕೆಂದು ಸಂಸದ ಅಮರೇಶ್ವರ ನಾಯಕ ತಿಳಿಸಿದರು.
![ತಿದ್ದುಪಡಿ ಕಾಯ್ದೆಯಿಂದ ಎಪಿಎಂಸಿ ಮುಚ್ಚಲ್ಲ..ಸಂಸದ ರಾಜಾ ಅಮರೇಶ್ವರ್ ನಾಯಕ mp amareshwar naik](https://etvbharatimages.akamaized.net/etvbharat/prod-images/768-512-9074718-264-9074718-1601993154186.jpg)
ಯಾದಗಿರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವ್ರು, ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ ಜಾರಿಯಾಗುತ್ತಿದ್ದಂತೆ ವಿಪಕ್ಷಗಳು ಅಪಪ್ರಚಾರ ಮಾಡ್ತಿವೆ. ವಿಪಕ್ಷಗಳ ಮಾತಿಗೆ ಕಿವಿಗೊಡದೆ ಜನರಿಗೆ ಮತ್ತು ರೈತರಿಗೆ ಎಪಿಎಂಸಿ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ. ಈ ಮಸೂದೆ ಜಾರಿಗೆ ತರುವ ಮುನ್ನ ಸಮಿತಿ ರಚಿಸಿ, ವರದಿ ಪಡೆದು ರೈತರಿಗೆ ಅನುಕೂಲವಾಗುವ ರೀತಿಯಲ್ಲಿಯೆ ಕಾನೂನು ಜಾರಿ ಮಾಡಲಾಗಿದೆ. ಆದ್ರೆ, ವಿರೋಧ ಪಕ್ಷದವರು ದಾರಿ ತಪ್ಪಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ತಿದ್ದುಪಡಿ ಕಾಯ್ದೆ ರೈತರಿಗೆ ಅನಕೂಲವಾಗಲಿದೆ ಅಂತ ತಿಳಿಸಿದರು.
ಹೀಗಾಗಿ ನಾವು ಜನರ ಮತ್ತು ರೈತರ ಬಳಿ ತೆರಳಿ ಜನರಲ್ಲಿ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಿದ್ದೇವೆ. ಜನರು ಮತ್ತು ರೈತರು ಮಸೂದೆ ಬಗ್ಗೆ ಸರಿಯಾದ ರೀತಿಯಲ್ಲಿ ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದರು.