ಯಾದಗಿರಿ :ಜಿಲ್ಲೆಯ ಶಹಾಪುರ ನಗರಸಭೆಯ ಚುನಾವಣೆಯು ಇದೆ ತಿಂಗಳ 29 ರಂದು ನಡೆಯಲಿದ್ದು ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.
ರಂಗೇರಿದ ಶಹಾಪುರ ನಗರಸಭೆ ಚುನಾವಣಾ ಪ್ರಚಾರ - ರಂಗೇರಿದ ಚುನಾವಣೆ ಪ್ರಚಾರ.
ಯಾದಗಿರಿ ಜಿಲ್ಲೆಯ ಶಹಾಪುರ ನಗರಸಭೆಯ 31 ವಾರ್ಡ್ಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಚಾರವು ದಿನೇ ದಿನೇ ರಂಗೇರುತ್ತಿದ್ದು ಜಿದ್ದಾಜಿದ್ದಿನ ಚುನಾವಣಾ ಕಣವಾಗಿ ಮಾರ್ಪಟ್ಟಿದೆ.
ಈ ಬಾರಿ 31 ವಾರ್ಡ್ಗಳಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್, ಬಿಜೆಪಿ ಪಕ್ಷದ ನಾಯಕರು ಚುನಾವಣಾ ಪ್ರಚಾರಕ್ಕೆ ತೆರಳಿದ್ದು ತಮ್ಮ ಪಕ್ಷದ ಸದಸ್ಯರನ್ನು ಆಯ್ಕೆ ಮಾಡುವಂತೆ ಮತದಾರ ಪ್ರಭುಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇತ್ತ ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ತಮ್ಮ ಸದಸ್ಯರನ್ನು ಆಯ್ಕೆ ಮಾಡುವಂತೆ ಎಲ್ಲಾ ಕಾರ್ಯಕರ್ತರಿಗೆ ಕರೆ ನೀಡುತ್ತಿದ್ದಾರೆ. ಕಳೆದ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಈ ಬಾರಿ ಕಾಂಗ್ರೆಸ್ ಸದಸ್ಯರನ್ನು ಆಯ್ಕೆ ಮಾಡುವಂತೆ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಮನವೊಲಿಸುತ್ತಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಗುರುಪಾಟೀಲ್ ಶೀರವಾಲ ಮತದಾರರ ಮನೆ ಬಾಗಿಲಿಗೆ ತೆರಳಿದ್ದು ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಕ್ಷೇತ್ರದ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಾ ಬಿಜೆಪಿಗೆ ಮತ ನೀಡುವಂತೆ ಬೇಡಿಕೊಂಡರು.
ಮತ್ತೊಂದೆಡೆ ಜೆಡಿಎಸ್ ಮುಖಂಡ ಅಮೀನರೆಡ್ಡಿ ಕೂಡ ಶಾಸಕ ಶರಣಬಸಪ್ಪ ದರ್ಶನಾಪುರ ವಿರುದ್ಧ ಹರಿಹಾಯ್ದದರು. ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ಗೆ ಮತಹಾಕದೆ ಜೆಡಿಎಸ್ ಗೆ ಮತ ಹಾಕುವಂತೆ ಪರೋಕ್ಷವಾಗಿ ಮತದಾರರಿಗೆ ಮನವಿ ಮಾಡಿದರು.
TAGGED:
ರಂಗೇರಿದ ಚುನಾವಣೆ ಪ್ರಚಾರ.