ಸುರಪುರ:ಎರಡು ವಿಧಾನಸಭಾ ಹಾಗೂ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸುರಪುರದ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷದ ನಾಯಕತ್ವ ಬದಲಾವಣೆ ಇಲ್ಲ. ಮುಂದಿನ ಮೂರು ವರ್ಷ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.