ಗುರುಮಠಕಲ್: ಗುರುಮಠಕಲ್ ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಗುರುಮಠಕಲ್ ಹಾಗೂ ವಿವಿಧ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಪುರಸಭೆ ಸದಸ್ಯರು ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗರಿ, ಶಿಶು ಅಭಿವೃದ್ಧಿ ಯೋಜನೆ ಗುರುಮಠಕಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ಕೃಷ್ಣ ಮೇದಾ ಮಾತನಾಡಿ, ಸೆಪ್ಟೆಂಬರ್ ತಿಂಗಳನ್ನು ಪೋಷಣ್ ತಿಂಗಳು ಎಂದು ಆಚರಿಸಲಾಗುತ್ತದೆ ಎಂದರು.
ಈ ಯೋಜನೆಯಡಿ ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 100 ದಿನಗಳ ಕಾಲ ಉತ್ತಮ ಪೌಷ್ಟಿಕ ಆಹಾರ ಸೇವನೆ ಮಾಡುವುದು. ರಕ್ತ ಹೀನತೆ, ಅತಿಸಾರ ಭೇದಿ ತಡೆಗಟ್ಟುವುದು, ಪೌಷ್ಟಿಕ ಆಹಾರ ಪೂರೈಕೆ ಮಾಡುವುದರ ಮೂಲಕ ತಾಯಿ ಮತ್ತು ಶಿಶುವಿನ ಉತ್ತಮ ಆರೋಗ್ಯ ಕಾಪಾಡುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು.