ಯಾದಗಿರಿ: ಮಳೆ ನೀರಿನಿಂದ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನ ರಕ್ಷಣೆ ಮಾಡಿರುವ ಘಟನೆ ತಾಲೂಕಿನ ಪಗಲಾಪುರ ಗ್ರಾಮದ ಬಳಿ ನಡೆದಿದೆ.
ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆ ರಕ್ಷಣೆ ಮಾಡಿದ ಸ್ಥಳೀಯರು: VIDEO - Yadagiri protected women News
ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಮಹಿಳೆಯೊಬ್ಬರು ನೀರಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದರು. ತಕ್ಷಣ ಸುತ್ತಮುತ್ತಲಿದ್ದ ಗ್ರಾಮಸ್ಥರು ನೀರಿಗೆ ಧುಮುಕಿ ಮಹಿಳೆಯನ್ನ ರಕ್ಷಣೆ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ಜಿಲ್ಲಾದ್ಯಂತ ಬೆಳಗ್ಗೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಆಶನಾಳ್ ಗ್ರಾಮದ ಮಹಿಳೆ ಬೆಳಗ್ಗೆ ಹೊಲಕ್ಕೆ ಹೋಗಿ ಕೆಲಸ ಮುಗಿಸಿಕೊಂಡು ಸಂಜೆ ಸುಮಾರು ನಾಲ್ಕು ಗಂಟೆ ವೇಳೆಗೆ ಗ್ರಾಮಕ್ಕೆ ವಾಪಸ್ ಮರಳುತ್ತಿದ್ದರು. ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಮಹಿಳೆ ನೀರಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದರು. ತಕ್ಷಣ ಸುತ್ತಮುತ್ತಲಿದ್ದ ಗ್ರಾಮಸ್ಥರು ನೀರಿಗೆ ಧುಮುಕಿ ಮಹಿಳೆಯನ್ನ ರಕ್ಷಣೆ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಹಳ್ಳದ ನೀರು ಪಾಲಾಗುತ್ತಿದ್ದ ಮಹಿಳೆಯನ್ನ ರಕ್ಷಣೆ ಮಾಡಿದ ಸ್ಥಳೀಯರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಜಿಲ್ಲಾದ್ಯಂತ ಮಳೆ ಮುಂದುವರೆದಿದೆ.