ಕರ್ನಾಟಕ

karnataka

ETV Bharat / state

ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

ಯಾದಗಿರಿ ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವಲ್ಲಿ ಮಕ್ಕಳ ರಕ್ಷಣಾ ಅಧಿಕಾರಿಗಳು ಯಶ್ವಸಿಯಾಗಿದ್ದಾರೆ.

ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

By

Published : May 8, 2019, 11:30 PM IST

ಯಾದಗಿರಿ:ಜಿಲ್ಲೆಯಲ್ಲಿ ಬಾಲ್ಯವಿವಾಹಕ್ಕೆ ಬ್ರೇಕ್ ಹಾಕುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಯಶ್ವಸಿಯಾಗಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗೋವಿಂದ ರಾಥೋಡ್ ನೇತೃತ್ವದಲ್ಲಿ ಇದುವರೆಗೂ ಜಿಲ್ಲೆಯಲ್ಲಿ ಸುಮಾರು ಬಾಲ್ಯ ವಿವಾಹ ತಡೆಯಲಾಗಿದೆ. 1955ರ ಹಿಂದೂ ವಿವಾಹ ಕಾಯ್ದೆ ಪ್ರಕಾರ ಮದುವೆ ಮಾಡಿಕೊಳ್ಳಲು ಹೆಣ್ಣಿಗೆ 18 ವರ್ಷ ಗಂಡಿಗೆ 21 ವರ್ಷ ವಯಸ್ಸಾಗಿರಬೇಕು. ಆದರೆ, ಪೋಷಕರು ಈ ಕಾನೂನು ಗಾಳಿಗೆ ತೂರಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ.

ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

ಅದರಲ್ಲೂ ಯಾದಗಿರಿ, ಶಹಾಪುರ ಈ ಭಾಗಗಳಲ್ಲಿ ಅತಿ ಹೆಚ್ಚಾಗಿ ಬಾಲ್ಯ ವಿವಾಹ ನಡೆದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮದುವೆ ಮಾಡಿ ಮಕ್ಕಳನ್ನು ದುಡಿಸಿಕೊಳ್ಳುವ ಪ್ರವೃತಿ ಹೆಚ್ಚಾಗಿದೆ. ಹೆಣ್ಣು ಮಕ್ಕಳ ಮೇಲಾಗುವ ದುಷ್ಪಾರಿಣಾಮಗಳು ತಿಳಿಯದೇ ಮದುವೆ ಮಾಡಲು ಮುಂದಾಗುತ್ತಿರುವ ಪೋಷಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಬಾಲ್ಯ ವಿವಾಹಗಳನ್ನ ತಡೆಯುವಲ್ಲಿ ಅಧಿಕಾರಿಗಳು ಯಶ್ವಸಿಯಾಗಿದ್ದರೂ ಕೂಡ ಈ ಭಾಗದ ಜನರಿಗೆ ತಿಳಿವಳಿಕೆ ನೀಡುವುದು ಮುಂಜಾಗೃತ ಕಾರ್ಯಕ್ರಮಗಳನ್ನು ನಡೆಸುವುದು ಆ ಮೂಲಕ ಸಂಪೂರ್ಣವಾಗಿ ಬಾಲ್ಯವಿವಾಹ ತಡೆಗಟ್ಟುವಲ್ಲಿ ಅಧಿಕಾರಿಗಳು ಯಶಸ್ವಿಯಾಗಬೇಕಾಗಿದೆ.

ABOUT THE AUTHOR

...view details