ಯಾದಗಿರಿ : ನಗರಸಭೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಡೆಸುತ್ತಿರುವವರ ಮೇಲೆ ನಗರಸಭೆ ಅಧ್ಯಕ್ಷ ಸುರೇಶ್ ಅಂಬಿಗೇರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ನಗರದ ಅಜೀಜ್ ಕಾಲೋನಿಯ ಮೆಟ್ರೋ, ಸಹರಾ ಕಾಲೋನಿ ಬಳಿಯಿರುವ ನಿಬ್ರಾಸ್ ಮಿನರಲ್ ವಾಟರ್ ಘಟಕದ ಮೇಲೆ ದಾಳಿ ನಡೆಸಲಾಗಿದೆ.
ಅಕ್ರಮವಾಗಿ ನಡೆಯುತ್ತಿದ್ದ ನೀರಿನ ದಂಧೆಗೆ ಕಡಿವಾಣ ಹಾಕುವ ಉದ್ದೇಶದಿಂದ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ಅವರು ಅಕ್ರಮ ನೀರಿನ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಘಟಕದಲ್ಲಿ ಅವಧಿ ಮೀರಿದ ನೀರಿನ ಪಾಕೆಟ್, ರಾಸಾಯನಿಕಗಳನ್ನು ಪತ್ತೆ ಹಚ್ಚಲಾಗಿದೆ. ಹಲವಾರು ವರ್ಷಗಳಿಂದ ದಂಧೆ ನಡೆಸುತ್ತಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.