ಕರ್ನಾಟಕ

karnataka

ETV Bharat / state

ಗ್ರಾಪಂ ಸಾಮಾನ್ಯ ಸಭೆಗೆ ಪಿಡಿಒ ಗೈರು.. ಅಧಿಕಾರಿ ವಿರುದ್ಧ ಸದಸ್ಯರಿಂದ ಪ್ರತಿಭಟನೆ - ಯಾದಗಿರಿ ತಾಲ್ಲೂಕಿನ ಮೋಟ್ನಳ್ಳಿ ಗ್ರಾಮ ಪಂಚಾಯಿತಿ

ಯಾದಗಿರಿ ತಾಲೂಕಿನ ಮೋಟ್ನಳ್ಳಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗೆ ಪಿಡಿಒ ಗೈರಾದ ಹಿನ್ನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಸದಸ್ಯರು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪಿಡಿಒ ಅಮಾನತು ಮಾಡುವಂತೆ ಆಗ್ರಹಿಸಿದರು.

panchayat members protest against PDO in yadagiri
ಪಿಡಿಒ ಗೈರು ಖಂಡಿಸಿ ಪ್ರತಿಭಟನೆ

By

Published : Dec 1, 2019, 11:15 AM IST

ಯಾದಗಿರಿ: ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆಗೆ ಪಿಡಿಒ ಗೈರಾದ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಯಾದಗಿರಿ ತಾಲೂಕಿನ ಮೋಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಪ್ಪ, ಉಪಾಧ್ಯಕ್ಷೆ ನೀಲಮ್ಮ ಕೂಡ ಪ್ರತಿಭಟನೆಯಲ್ಲಿ‌ ಭಾಗಿಯಾಗಿದ್ದು, ಪಿಡಿಒ ಭಾನುಬೇಗಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಡಿಒ ಗೈರು ಖಂಡಿಸಿ ಗ್ರಾಪಂ ಸದಸ್ಯರಿಂದ ಪ್ರತಿಭಟನೆ..

ಬೆಳಗ್ಗೆ 10:30ಕ್ಕೆ ಆರಂಭವಾಗಬೇಕಿದ್ದ ಸಭೆ ಮಧ್ಯಾಹ್ನ 2 ಗಂಟೆಯಾದರೂ ಸಭೆಗೆ ಪಿಡಿಒ ಆಗಮಿಸಿರಲಿಲ್ಲ. ರೊಚ್ಚಿಗೆದ್ದ ಪಂಚಾಯತ್ ಅಧ್ಯಕ್ಷ,ಉಪಾಧ್ಯಕ್ಷರು ಸೇರಿ 25 ಸದಸ್ಯರು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಅಭಿವೃದ್ಧಿ ಕುಂಟಿತ ವಿಚಾರವಾಗಿ ಪಿಡಿಒ ಬೇಗಂ ನಿರ್ಲಕ್ಷ್ಯವೇ ಕಾರಣ, ಕಾಮಗಾರಿಗಳು ವಿಳಂಬಕ್ಕೆ ಪಿಡಿಒ ನಿರ್ಧಾರವೇ ಕಾರಣ ಎಂದು ಆರೋಪಿಸಿದರು. ಕೂಡಲೇ ಪಿಡಿಒ ಅವರನ್ನು ಅಮಾನತು‌‌ ಮಾಡಿ ಎಂದು ಆಗ್ರಹಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details