ಗುರುಮಠಕಲ್: ಇಲ್ಲಿನ ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ 16 ಸಿಬ್ಬಂದಿಗೆ ಜುಲೈ 13 ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ, ಜುಲೈ 14 ರಂದು ವರದಿ ನೆಗೆಟಿವ್ ಬಂದಿದೆ ಎಂದು ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಸುದ್ದಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪಾಸಿಟಿವ್ ಇದ್ದವರು ಒಂದೇ ದಿನದಲ್ಲಿ ನೆಗೆಟಿವ್: ಗೊಂದಲಕ್ಕೆ ಕಾರಣವಾದ ಪೊಲೀಸರ ಕೋವಿಡ್ ಟೆಸ್ಟ್ - ಗುರುಮಠಕಲ್ ಪೊಲೀಸರಿಗೆ ಕೊರೊನಾ
ಪಾಸಿಟಿವ್ ಬಂದಿದ್ದ ಗುರುಮಠಕಲ್ ಪೊಲೀಸ್ ಠಾಣೆ ಸಿಬ್ಬಂದಿಯ ಕೋವಿಡ್ ವರದಿ ಒಂದೇ ದಿನದಲ್ಲಿ ನೆಗೆಟಿವ್ ಬಂದಿದ್ದು, ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿದೆ.
ಒಂದು ದಿನದ ಅಂತರದಲ್ಲಿ ಪಾಸಿಟಿವ್ ನೆಗೆಟಿವ್ ಆಗೋದಕ್ಕೆ ಹೇಗೆ ಸಾಧ್ಯ ಎಂಬ ಪ್ರಶ್ನೆ ಸಾರ್ವಜನಕರಲ್ಲಿ ಮೂಡಿದೆ. ಈ ಬಗ್ಗೆ ವೈದ್ಯರನ್ನು ಕೇಳಿದ್ರೆ, ಜುಲೈ 4 ರಂದೇ ಸಿಬ್ಬಂದಿ ಸ್ಯಾಂಪಲ್ಸ್ ಸಂಗ್ರಹಿಸಲಾಗಿತ್ತು. ಜುಲೈ 11 ಕ್ಕೆ ವರದಿಯೂ ಬಂದಿತ್ತು. ಜುಲೈ 13 ಕ್ಕೆ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗಿದೆ. ಒಂಭತ್ತು ದಿನಗಳ ಅಂತರ ಇದ್ದಿದ್ದರಿಂದ ಅವರನ್ನು ಮತ್ತೆ ಟ್ರೂನೆಟ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ನೆಗೆಟಿವ್ ಬಂದಿದೆ. ಹೀಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇತ್ತ, ಹಿರಿಯ ಪೊಲೀಸ್ ಅಧಿಕಾರಿಗಳು ಎಲ್ಲಾ ಸಿಬ್ಬಂದಿಯನ್ನು ಹೋಂಕ್ವಾರಂಟೈನ್ ಮಾಡಲಾಗಿದೆ. ಜನರು ಚಿಂತಿಸುವ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ.