ಗುರುಮಠಕಲ್/ಯಾದಗಿರಿ: ಕೋವಿಡ್ 3ನೇ ಅಲೆ ಹಿನ್ನೆಲೆ ಸರ್ಕಾರದ ಆದೇಶದಂತೆ ಗುರುಮಠಕಲ್ ತಾಲೂಕಿಗೆ ಹೊಂದಿಕೊಂಡ ತೆಲಂಗಾಣ ರಾಜ್ಯದ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕೋವಿಡ್ ತಪಾಸಣೆಯನ್ನು ಮಾಡಲಾಗುವುದು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಪಿ.ವೇದಮೂರ್ತಿ ಹೇಳಿದರು.
ಸಮೀಪದ ಪುಟಪಾಕ ಗ್ರಾಮದ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಸೋಂಕಿನ 3ನೇ ಅಲೆಯ ಬಗ್ಗೆ ತಜ್ಞರ ಎಚ್ಚರಿಕೆಯ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಕೆಲ ಗ್ರಾಮಗಳು ತೆಲಂಗಾಣ ರಾಜ್ಯದ ಗಡಿಗೆ ಹೊಂದಿಕೊಂಡಿದ್ದು, ಆ ರಾಜ್ಯಗಳಿಂದ ಆಗಮಿಸುವ ಎಲ್ಲಾ ವಾಹನಗಳು ಮತ್ತು ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುವುದು ಎಂದರು.