ಯಾದಗಿರಿ:ಹತ್ತಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದ ಹೊಲದ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 20 ಕೆಜಿ ಗಾಂಜಾ ಗಿಡಗಳನ್ನು ಜಪ್ತಿ ಮಾಡುವ ಮೂಲಕ ಆರೋಪಿಯೋರ್ವನನ್ನ ವಶಕ್ಕೆ ಪಡೆದಿದ್ದಾರೆ.
ಪೊಲೀಸರ ದಾಳಿ: 20 ಕೆಜಿಯಷ್ಟು ಗಾಂಜಾ ಗಿಡ ಜಪ್ತಿ - ಗಾಂಜಾ ಜಪ್ತಿ
ಜಿಲ್ಲೆಯ ಶಹಪುರ ತಾಲೂಕಿನ ಇಂಗಳಗಿ ಗ್ರಾಮದ ಸಿದ್ದಪ್ಪ ತಂದೆ ಭೀಮಾರಾಯ್ ಎಂಬುವವರು ತನ್ನ ಜಮೀನಿನಲ್ಲಿ ಹತ್ತಿ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ಅಕ್ರಮ ಗಾಂಜಾ ವಶ
ಜಿಲ್ಲೆಯ ಶಹಪುರ ತಾಲೂಕಿನ ಇಂಗಳಗಿ ಗ್ರಾಮದ ಸಿದ್ದಪ್ಪ ತಂದೆ ಭೀಮಾರಾಯ್ ಎಂಬುವವರು ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಭೀಮರಾಯ ಗುಡಿ ಪೊಲೀಸ್ ಠಾಣೆ ಪಿಎಸ್ಐ ಹಾಗೂ ತಹಶೀಲ್ದಾರ್ ಜಗನ್ನಾಥ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಹೊಲದಲ್ಲಿ ಬೆಳೆದಿದ್ದ 60 ಸಾವಿರ ರೂ. ಮೌಲ್ಯದ ಗಾಂಜಾ ಬೆಳೆ ಜಪ್ತಿ ಮಾಡಲಾಗಿದೆ. ಆರೋಪಿ ಸಿದ್ದಪ್ಪನನ್ನ ವಶಕ್ಕೆ ಪಡೆದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೀಮರಾಯ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.