ಕರ್ನಾಟಕ

karnataka

ETV Bharat / state

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ​ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ಅನುಮಾನಾಸ್ಪದ ಸಾವು! - man Suspicious dies

ಯಾದಗಿರಿಯ ಮಲ್ಹಾರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

escaped man Suspicious dies in Yadagiri
ರಮೇಶ್​​ ರಾಥೋಡ್​ ಮೃತ ವ್ಯಕ್ತಿ

By

Published : Nov 29, 2021, 12:36 PM IST

ಯಾದಗಿರಿ: ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಪೊಲೀಸರು ದಾಳಿ ನಡೆಸಿದಾಗ, ಯುವಕರ ಗುಂಪು ಪರಾರಿಯಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್​​ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ಅನುಮಾನಾಸ್ಪದ ಸಾವು

ರಮೇಶ್​​ ರಾಥೋಡ್​ ಮೃತ ವ್ಯಕ್ತಿ. ಸಾವು ಯಾವ ರೀತಿ ಸಂಭವಿಸಿದೆ ಎಂಬುದು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸಿದರೆ ನಿಜಾಂಶ ಹೊರಬರಲಿದೆ. ಈ ಕುರಿತು ಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ, ಸಾರ್ವಜನಿಕ ವಲಯದಲ್ಲಿ ಈ ಸಾವಿನ ಸುತ್ತ ಹಲವು ಅನುಮಾನಗಳ ಹುತ್ತ ಹುಟ್ಟಿಕೊಂಡಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ:ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆ ವಾಹನ ಓಡಾಟ: ನಜ್ಜುಗುಜ್ಜಾದ ಶವ

ABOUT THE AUTHOR

...view details