ಯಾದಗಿರಿ:ವಿದ್ಯುತ್ ಟ್ರಾನ್ಸ್ಫಾರ್ಮರ್ ಬೆಂಕಿಯಿಂದ ಹೊತ್ತಿ ಉರಿದ ಪರಿಣಾಮ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಹಬ್ಬಳ್ಳಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ.
ಹೊತ್ತಿ ಉರಿದ ವಿದ್ಯುತ್ ಟ್ರಾನ್ಸ್ಫಾರ್ಮರ್: ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ - ಟ್ರಾನ್ಸಫಾರ್ಮರ್ ಯಂತ್ರದಿಂದ ಆಯಿಲ್ ಸೋರಿಕೆ
ವಿದ್ಯುತ್ ಟ್ರಾನ್ಸ್ಫಾರ್ಮರ್ ಬೆಂಕಿಯಿಂದ ಹೊತ್ತಿ ಉರಿದ ಪರಿಣಾಮ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಹಬ್ಬಳ್ಳಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ.
ಗ್ರಾಮದ ಬಸ್ ನಿಲ್ದಾಣದ ಬಳಿ ಶಹಪುರಕ್ಕೆ ಹೋಗುವ ರಸ್ತೆಯಲ್ಲಿರುವ ಈ ಟ್ರಾನ್ಸ್ಫಾರ್ಮರ್ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಎರಡು ದಿನಗಳ ಹಿಂದಷ್ಟೇ ಟ್ರಾನ್ಸ್ಫಾರ್ಮರ್ನಿಂದ ಆಯಿಲ್ ಸೋರಿಕೆ ಆಗುತ್ತಿತ್ತಂತೆ.
ಜೆಸ್ಕಾಂ ಅಧಿಕಾರಿಗಳು ಸರಿಯಾದ ದುರಸ್ತಿ ಮಾಡದ ಹಿನ್ನೆಲೆ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ರಾತ್ರಿ ಈ ಘಟನೆ ಸಂಭವಿಸಿದ್ದು, ಜೆಸ್ಕಾಂ ಅಧಿಕಾರಿಗಳಿಗೆ ಫೋನ್ ಮೂಲಕ ಮಾಹಿತಿ ನೀಡಿದರೂ ಯಾವೊಬ್ಬ ಅಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.