ಕರ್ನಾಟಕ

karnataka

ETV Bharat / state

ಮಳೆಗಾಲ ಆರಂಭಕ್ಕೂ ಮೊದಲೇ ಸಮಸ್ಯೆ: ರೋಗ ಹರಡುವ ಭೀತಿಯಲ್ಲಿ ಗ್ರಾಮಸ್ಥರು - Drainage system

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇದರ ಜೊತೆಗೆ ಹಲವು ಸಮಸ್ಯೆಗಳು ಸಹ ಹುಟ್ಟಿಕೊಳ್ಳುತ್ತಿವೆ. ಇದೀಗ ಯಾದಗಿರಿಯ ಲಿಂಗೇರಿ ಗ್ರಾಮದಲ್ಲಿ ಮಳೆ ನೀರಿನಿಂದ ಜನತೆ ಸಮಸ್ಯೆ ಎದುರಿಸುವಂತಾಗಿದೆ.

Problem of Drainage system begins in Yadagiri before the start of rainy season
ಮಳೆಗಾಲ ಆರಂಭಕ್ಕೂ ಮೊದಲೇ ಯಾದಗಿರಿಯಲ್ಲಿ ಜನ್ಮತಾಳಿದ ಸಮಸ್ಯೆ

By

Published : Jun 3, 2020, 4:41 PM IST

ಯಾದಗಿರಿ: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಇಲ್ಲಿನ ಲಿಂಗೇರಿ ಗ್ರಾಮದ ರಸ್ತೆಗಳು ಜಲಾವೃತವಾಗಿದ್ದು, ಗ್ರಾಮಸ್ಥರು ಓಡಾಡಲು ಪರದಾಡುವಂತಾಗಿದೆ.

ಗ್ರಾಮದಲ್ಲಿ ಒಳ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿಯ ಜನ ಮಳೆ ನೀರಿನಿಂದ ಸಾಕಷ್ಟು ಸಂಕಷ್ಟ ಅನುಭವಿಸುವಂತಾಗಿದೆ.

ಮಳೆಗಾಲ ಆರಂಭಕ್ಕೂ ಮೊದಲೇ ಯಾದಗಿರಿಯಲ್ಲಿ ಸಮಸ್ಯೆ

ಯಾದಗಿರಿ ತಾಲೂಕಿನ ಲಿಂಗೇರಿ ಗ್ರಾಮದ ಅಂಬೇಡ್ಕರ್ ನಗರದ ಬಡಾವಣೆಯ ನಿವಾಸಿಗಳಿಗೆ ಪ್ರತಿ ವರ್ಷ ಈ ಸಮಸ್ಯೆ ಎದುರಾಗುತ್ತಿದೆ. ಬಡಾವಣೆಯಲ್ಲಿ ಒಳ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಯಲ್ಲಿ ಬಳಸಿದ ನೀರು ಕೂಡ ಮಳೆ ನೀರಿನಲ್ಲಿ ಬೆರೆತು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜನ ಬದುಕುವಂತಾಗಿದೆ.

ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಗ್ರಾಮ ಪಂಚಾಯತ್​ ಅಧಿಕಾರಿಗಳ ಗಮನಕ್ಕೆ ತಂದರೂ ಇಲ್ಲಿಯವರೆಗೂ ಯಾರೊಬ್ಬರೂ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ ಅಂತ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಮಳೆ ಬಂದರೆ ಸಾಕು ಬಡಾವಣೆಯ ಎಲ್ಲಾ ರಸ್ತೆಗಳು ಜಲಾವೃತಗೊಳ್ಳುವ ಮೂಲಕ ಇಲ್ಲಿಯ ಜನ ಹೊರಗಡೆ ಓಡಾಡಲು ಕೂಡ ನರಕ ಯಾತನೆ ಅನುಭವಿಸುವಂತಾಗಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಬಡವಾಣೆಯಲ್ಲಿ ಒಳ ಚರಂಡಿ ಕಾಮಗಾರಿ ಕೈಗೊಳ್ಳುವ ಮೂಲಕ ಮಳೆಗಾಲದಲ್ಲಿ ತಮಗೆ ಆಗುತ್ತಿರುವ ತೊಂದರೆಗೆ ಮುಕ್ತಿ ದೊರಕಿಸಿಕೊಡಬೇಕು ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.

ABOUT THE AUTHOR

...view details