ಕರ್ನಾಟಕ

karnataka

ETV Bharat / state

ಕೋವಿಡ್​ ತಡೆಗೆ ಸಾರ್ವಜನಿಕರ ಸಹಕಾರವೂ ಮುಖ್ಯ; ಎ.ಬಿ.ಇಬ್ರಾಹಿಂ - ಯಾದಗಿರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಸುದ್ದಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ, ಕೋವಿಡ್-19 ಸೋಂಕಿನ ಲಾಕ್‍ಡೌನ್ ಸಂದರ್ಭಲ್ಲಿ ನಗರ ಪಟ್ಟಣಗಳಿಂದ ಹಳ್ಳಿಗಳಿಗೆ ಹಿಂತಿರುಗಿದ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ನೀಡಲಾಗಿದೆ.

Yadagiri
Yadagiri

By

Published : Sep 19, 2020, 7:59 PM IST

ಯಾದಗಿರಿ:ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಕೋವಿಡ್-19 ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಲು ಸಾರ್ವಜನಿಕರು ಮುಂದೆ ಬರಬೇಕು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ ಇಬ್ರಾಹಿಂ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿ ಮತ್ತು ಮತ್ತಿತರ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರ್ ಬಳಸಿ. ಸ್ಯಾನಿಟೈಸರ್​ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳುವಂತೆ ಮತ್ತು ಸಾಮಾಜಿಕವಾಗಿ ಗುಂಪು ಸೇರುವುದನ್ನು ಮಾಡಬಾರದು ಎಂದು ಜನರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 3,89,100 ಹೆಕ್ಟೇರ್‌ ಬಿತ್ತನೆಯ ಗುರಿ ಹೊಂದಾಲಾಗಿತ್ತು. ಅದರಲ್ಲಿ 3,84,957 ಹೆಕ್ಟೇರ್‌ ಬಿತ್ತನೆಯಾಗಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 16,729 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮುಂಗಾರು ಹಂಗಾಮಿನಲ್ಲಿ 4124 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಬಿತ್ತನೆಯಾಗಿದ್ದು, ಅದರಲ್ಲಿ ಅತಿವೃಷ್ಟಿಯಿಂದಾಗಿ 238 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ವಿವರಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ, ಕೋವಿಡ್-19 ಸೋಂಕಿನ ಲಾಕ್‍ಡೌನ್ ಸಂದರ್ಭಲ್ಲಿ ನಗರ ಪಟ್ಟಣಗಳಿಂದ ಹಳ್ಳಿಗಳಿಗೆ ಹಿಂತಿರುಗಿದ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಸೋಂಕು ಪರೀಕ್ಷೆಗೆ 72,728 ಕಳುಹಿಸಲಾದ ಒಟ್ಟು ಮಾದರಿಗಳು, 7,505 ಕೋವಿಡ್-19 ಪಾಸಿಟಿವ್‌ ಪ್ರಕರಣಗಳಿದ್ದು, 64,672 ಮಂದಿಯ ವರದಿ ನೆಗೆಟಿವ್‌ ಬಂದಿದೆ. 6,354 ಜನ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್-19 ಸೋಂಕಿನಿಂದ 49 ಜನರು ಮೃತಪಟ್ಟಿದ್ದಾರೆ. 1,102 ಸಕ್ರಿಯ ಪ್ರಕರಣಗಳಿದ್ದು, 834 ಮಂದಿ ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲಾಗಿದೆ. 25,728 ಪ್ರಾಥಮಿಕ ಸಂಪರ್ಕದಲ್ಲಿದ್ದವರು, 25,683 ದ್ವಿತೀಯ ಸಂಪರ್ಕದಲ್ಲಿದ್ದಾರೆ ಎಂದು ವಿವಹಿಸಿದರು.

571 ಕಂಟೈನ್ಮೆಂಟ್​ ವಲಯಗಳನ್ನು ರಚಿಸಲಾಗಿದೆ ಹಾಗೂ 250 ಡಿ-ನೋಟಿಫೈಡ್ ಕಂಟೈನ್‍ಮೆಂಟ್ ವಲಯಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ನೀಡಿದರು.

ಇನ್ನು, ಸಭೆಯಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ಅಶ್ವೀಜಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಭಗವಂತ ಅನವಾರ, ಡಾ. ಸೂರ್ಯಪ್ರಕಾಶ ಎಂ.ಕಂದಕೂರ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details