ಯಾದಗಿರಿ: ಕೃಷ್ಣಾ ನದಿ ಪ್ರವಾಹದ ನೀಲಕಂಠರಾಯನ ನಡುಗಡ್ಡೆಯಲ್ಲಿ ಸಿಲುಕಿದ್ದ ತುಂಬು ಗರ್ಭಿಣಿಯನ್ನು ರಕ್ಷಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ಜಲ ಸಂಕಷ್ಟ: ನಡುಗಡ್ಡೆಯಲ್ಲಿ ಸಿಲುಕಿದ್ದ ತುಂಬು ಗರ್ಭಿಣಿಯ ರಕ್ಷಣೆ - ನಡುಗಡ್ಡೆಯಲ್ಲಿ ಸಿಲುಕಿದ್ದ ತುಂಬು ಗರ್ಭಿಣಿಯ ರಕ್ಷಣೆ
ಕೃಷ್ಣಾ ನದಿ ಪ್ರವಾಹದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ತುಂಬು ಗರ್ಭಿಣಿಯನ್ನು ಮಧ್ಯರಾತ್ರಿ ಬೋಟ್ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ಬಸವ ಸಾಗರ ಜಲಾಶಯದ ಒಳ ಹರಿವು ಹೆಚ್ಚಿದ ಹಿನ್ನೆಲೆ ಸುರಪುರ ತಾಲೂಕಿನ ನೀಲಕಂಠರಾಯನ ನಡುಗಡ್ಡೆಯು ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ ನೀಲಕಂಠರಾಯನ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿತ್ತು. ಕೂಡಲೇ ಅವರನ್ನು ರಕ್ಷಿಸುವಲ್ಲಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಯಿತು.
ನೀರಿನ ಹರಿವು ಹೆಚ್ಚಾದ ಕಾರಣ ತುಂಬು ಗರ್ಭಿಣಿ ನೀಲಕಂಠರಾಯನ ನಡುಗಡ್ಡೆಯಲ್ಲಿ ಸಿಲುಕಿದ್ದರು. ಕೃಷ್ಣಾ ನದಿ ಪ್ರವಾಹದ ನಡುಗಡ್ಡೆಯಲ್ಲಿ ಸಿಲುಕಿದ್ದ ಮಹಿಳೆಯನ್ನು ಬೋಟ್ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.