ಯಾದಗಿರಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಯಾದಗಿರಿ ನಗರದ ಗಾಂಧಿ ವೃತ್ತದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಬೃಹತ್ ಪ್ರತಿಭಟನೆ - ಯಾದಗಿರಿಯಲ್ಲಿ ಮುಸ್ಲಿಂ ಸಮುದಾಯ ಪ್ರತಿಭಟನೆ ಲೇಟೆಸ್ಟ್ ಸುದ್ದಿ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಯಾದಗಿರಿ ನಗರದ ಗಾಂಧಿ ವೃತ್ತದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
![ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಬೃಹತ್ ಪ್ರತಿಭಟನೆ protest](https://etvbharatimages.akamaized.net/etvbharat/prod-images/768-512-5391240-thumbnail-3x2-surya.jpg)
ಗಾಂಧಿಚೌಕ್ನಲ್ಲಿ ಜಮಾಯಿಸಿದ್ದ ನೂರಾರು ಮುಸ್ಲಿಂ ಸಮುದಾಯದ ಜನ ಮತ್ತು ಯುವಕರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಸೂದೆ ತಿದ್ದುಪಡಿ ಮಾಡಬಾರದು ಎಂದು ಆಗ್ರಹಿಸಿದರು. ಪೌರತ್ವ ಮಸೂದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ದೇಶದ ಜಾತ್ಯಾತೀತ ತತ್ವವನ್ನು ನಾಶ ಮಾಡುವ ಮಸೂದೆಯನ್ನು ಯಾರು ಬೆಂಬಲಿಸುವುದಿಲ್ಲ. ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಮಸೂದೆಗೆ ನಮ್ಮ ವಿರೋಧವಿದೆ ಅಂತ ಕೇಂದ್ರ ಸರ್ಕಾರದ ಈ ನೀತಿಯನ್ನ ಪ್ರತಿಭಟನಾಕಾರರು ಖಂಡಿಸಿದರು.
ಕೇಂದ್ರ ಸರ್ಕಾರ ಕೂಡಲೇ ಈ ಮಸೂದೆ ವಾಪಸ್ ಪಡೆಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಅಂತ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು.